ವಿರಾಜಪೇಟೆ ಜ.30 : ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಘಟಕ ನೀಡುವ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿಗೆ ವಿರಾಜಪೇಟೆ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಸಿ ಗೀತಾಂಜಲಿ ಹಾಗೂ ಟಿ.ಕೆ. ವಾಮನ, ಹಾತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಸಿ.ಸಿ.ಭಾರತಿ ಆಯ್ಕೆಗೊಂಡಿದ್ದಾರೆ.
ಫೆ.11 ರಂದು ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









