ಶನಿವಾರಸಂತೆ ಜ.30 : ಭಾರತಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಘಟಕ, ಕೊಡಗು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿಯ ಆರೋಗ್ಯ ಅಭಿಯಾನ ಜಿಲ್ಲಾ ಮತ್ತು ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.
ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಕಾರ್ಯಕ್ರಮದ ಮಹತ್ವ ಕುರಿತು ಮಾಹಿತಿ ನೀಡಿ-ಹದಿ ಹರೆಯದ ಹೆಣ್ಣು ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿರುತ್ತದೆ, ಹೆಣ್ಣು ಮಕ್ಕಳು ದೈಹಿಕ ಆರೋಗ್ಯ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದ ಅವರು ಹೆಣ್ಣು ಮಕ್ಕಳು ಪೌಷ್ಠಿಕಾಂಶ ಒಳಗೊಂಡಿರುವ ಮತ್ತು ಸಮತೋಲನ ಪ್ರಕಾರದಲ್ಲಿ ಆಹಾರವನ್ನು ಸೇವಿಸಬೇಕು ಇದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ ಸಲಹೆ ನೀಡಿದರು.
ಹದಿ ಹರೆಯದ ಹೆಣ್ಣು ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕ ಒತ್ತಡ ಎದುರಿಸುತ್ತಾರೆ ಇಂತಹ ಸಂದರ್ಭದಲ್ಲಿ ತಮ್ಮ ತಾಯಿಯ ಜೊತೆಯಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡು ಮಾನಸಿಕ ಮತ್ತು ದೈಹಿಕ ಸಮಸ್ಯೆಯನ್ನು ದೂರ ಮಾಡಬಹುದು. ಕೆಲವು ಹೆಣ್ಣು ಮಕ್ಕಳಲ್ಲಿ ಅನುವಂಶಿಯವಾಗಿ ಶುಗರ್ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆ ಬರುತ್ತದೆ, ಪ್ರತಿದಿನ ವ್ಯಾಯಮ ಮಾಡುವ ಮೂಲಕ ಇಂತಹ ಸಮಸ್ಯೆಯನ್ನು ದೂರ ಮಾಡಬಹುದೆಂದರು.
ಹೆಣ್ಣು ಮಕ್ಕಳು ಮೊಬೈಲ್ ಬಳಕೆಯಿಂದ ದೂರ ಇರಬೇಕು, ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು, ಎಚ್ಚರಿಕೆಯಿಂದಿರಬೇಕು, ಈ ಉದ್ದೇಶದಿಂದ ಸರಕಾರ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಳನ್ನು ಆಯೋಜಿಸುತ್ತಿದ್ದು ಈ ಮೂಲಕ ಮಹಿಳಾ ದೌರ್ಜನ್ಯವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ದುಂಬಿತ, ಜ್ಯೋತಿ, ಟಿ.ಜೆ.ಶೋಭ, ಕೆ.ವಿ.ಅಶ್ವಿತ, ನಂದೀಶ್, ಆಶಾ ಕಾರ್ಯಕರ್ತೆಯರು, ಕಾಲೇಜು ಉಪನ್ಯಾಸಕರು ಹಾಜರಿದ್ದರು.
ವರದಿ : ದಿನೇಶ್ ಮಾಲಂಬಿ. ಶನಿವಾರಸಂತೆ.