ಮಡಿಕೇರಿ ಜ.30 : ಪ್ರಸಕ್ತ (2022-23) ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲೆಯ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ ಆಧಾರ ಯೋಜನೆಯಿದ್ದು ಈ ಯೋಜನೆಯಡಿ ಬ್ಯಾಂಕ್ ಮೂಲಕ ರೂ.50 ಸಾವಿರ ಮತ್ತು ಇಲಾಖೆಯಿಂದ ಶೇ.50 ಸಬ್ಸಿಡಿ (ಸಹಾಯಧನ) ಸೇರಿ ರೂ.1 ಲಕ್ಷ ಸಾಲ ಸೌಲಭ್ಯ ನೀಡಲಾಗುತ್ತಿದೆ.
ಈ ಹಿಂದೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು, ಆದರೆ ಆನ್‍ಲೈನ್ ಮೂಲಕ ವಿಲೇ ಮಾಡಲು ತಾಂತ್ರಿಕ ತೊಂದರೆ ಹಾಗೂ ಸಮಯದ ಅಭಾವವಿರುವುದರಿಂದ ಅರ್ಜಿಗಳನ್ನು ಕಚೇರಿಗೆ ಫೆಬ್ರವರಿ, 06 ರೊಳಗೆ ಭೌತಿಕವಾಗಿ (ಆಫ್‍ಲೈನ್‍ನಲ್ಲಿ) ಸಲ್ಲಿಸಲು ತಿಳಿಸಿದೆ. ಜಿಲ್ಲೆಯ 18 ರಿಂದ 55 ವಯೋಮಿತಿಯೊಳಗಿನ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-295829 ನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*