ಮಡಿಕೇರಿ ಜ.30 : ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.(ಬಾಲಕರಿಗೆ ಮಾತ್ರ).
ಆಸಕ್ತ ಅಭ್ಯರ್ಥಿಗಳು ಫೆಬ್ರವರಿ, 15 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1 ಲಕ್ಷ. ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು.
ಅಕ್ಟೋಬರ್ 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸು 17ಳಿ ರಿಂದ 20 ವರ್ಷಗಳ ವಯಸ್ಸಿನ ಒಳಗಿರಬೇಕು. (ಅಭ್ಯರ್ಥಿಯು 01 ಡಿಸೆಂಬರ್ 2003 ದಿಂದ 01 ಜುಲೈ 2006 ರ ದಿನಾಂಕಗಳ ನಡುವೆ ಜನಿಸಿರಬೇಕು).
ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ (ಫೆಬ್ರವರಿ, 16 ರೊಳಗೆ) ಮೂಲಕ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್ https://bcwd.karnataka.gov.in ನಿಂದ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*