ಮಡಿಕೇರಿ ಜ.30 : ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಪುಸ್ತಕ ನೀತಿ ಪುರ್ನರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಆಹ್ವಾನಿಸಿದೆ.
ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುರ್ನರಚಿಸಲು ನಿರ್ಧರಿಸಲಾಗಿದೆ. ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡಂತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಈ ಪುಸ್ತಕ ನೀತಿ ರಚನೆ ಆಗಬೇಕಿದೆ. ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಹಿರಿಯ ಚಿಂತಕ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಇವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ.
ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬಂಧಿಸಿದಂತೆ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಈ ಸಮಿತಿಯು ನಿರ್ಧರಿಸಿದೆ. ಆದ್ದರಿಂದ ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರು “ಪುಸ್ತಕ ನೀತಿ”ಯಲ್ಲಿ ಅಳವಡಿಸಬೇಕಾದ ಅಂಶಗಳ ಬಗ್ಗೆ ತಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳನ್ನು ಫೆಬ್ರವರಿ, 10 ರೊಳಗೆ ಅಂಚೆ ಮೂಲಕ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, 1 ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಇಲ್ಲವೇ ಪ್ರಾಧಿಕಾರದ ಇ-ಮೇಲ್ ವಿಳಾಸ kannadappradhikara@gmail.com ಮೂಲಕವೂ ಕಳುಹಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*