ಮಡಿಕೇರಿ ಜ.30 : ರೈತಾಪಿ ವರ್ಗದ ಜೀವನಾಡಿಯಾಗಿರುವ ಸಹಕಾರಿ ಕ್ಷೇತ್ರವನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ.
ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ರೈತ ಸಹಕಾರಿಗಳಿಂದಲೇ ಸ್ಥಾಪನೆಗೊಂಡ ಸಹಕಾರಿ ಕ್ಷೇತ್ರ ಉಳಿದರೆ ಮಾತ್ರ ಕೃಷಿಕ ವರ್ಗ ಉಳಿಯಲು ಸಾಧ್ಯ. ಸಹಕಾರಿ ಕ್ಷೇತ್ರದ ಪ್ರಗತಿಗಾಗಿ ಸರ್ಕಾರ ಕೂಡ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನಬಾರ್ಡ್ ಸಹಾಯಧನವನ್ನು ಒದಗಿಸುತ್ತಿದ್ದು, ಇದೆಲ್ಲವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸಹಕಾರ ಸಂಘದ ಮೂಲಕ ದೊರೆಯುವ ಅನುಕೂಲಗಳನ್ನು ಪಡೆದು ರೈತರು ಕೂಡ ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.
ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ ಮಾತನಾಡಿ, ವಿದೇಶಗಳಲ್ಲಿ ಯಾಂತ್ರೀಕೃತ ಪದ್ಧತಿಯಡಿ ಕೃಷಿ ಕಾರ್ಯ ನಡೆಯುತ್ತಿದೆ. ಬೆಟ್ಟಗುಡ್ಡಗಳಿಂದ ಕೂಡಿದ ಕೊಡಗು ಜಿಲ್ಲೆಯಲ್ಲಿ ಇದು ಕಷ್ಟಸಾಧ್ಯವಾದರೂ ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು ಬೆಳೆಗಾರರು ತಂತ್ರಜ್ಞಾನ ಹಾಗೂ ಯಂತ್ರಗಳನ್ನು ಬಳಸಿ ಕೃಷಿ ಕೈಗೊಳ್ಳಬೇಕಿದೆ ಎಂದರು.
ಸಹಕಾರ ಸಂಘಗಳಲ್ಲಿ ದೊರೆಯುವ ಸಹಾಯಧನದ ಲಾಭವನ್ನು ಪಡೆದುಕೊಳ್ಳಬೇಕು. ಕೃಷಿಗೆ ಪೂರಕವಾದ ಎಲ್ಲಾ ಪರಿಕರಗಳು ಮತ್ತು ಯಂತ್ರೋಪಕರಣಗಳು ಸಹಕಾರಿ ಸಂಘಗಳಲ್ಲೇ ದೊರೆಯುತ್ತಿದ್ದು, ಬೆಳೆಗಾರರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮಾತನಾಡಿ, ಪ್ರಾಕೃತಿಕ ವಿಕೋಪ ಮತ್ತು ಅಕಾಲಿಕ ಮಳೆಯಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಸಾಲಮನ್ನಾ ಮಾಡಿದರೆ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಸಹಕಾರಿ ಸಂಘಗಳು ರೈತರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿದೆ ಎಂದರು.
ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ.ಸುಮನ್ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರಾದ ಹೊಸೂರು ಜೆ.ಸತೀಶ್ ಕುಮಾರ್, ಕಿಮ್ಮುಡಿರ ಎ.ಜಗದೀಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪೊಡನೋಳನ ಟಿ.ಶ್ರೀನಿವಾಸ್, ಬೇಗೂರು ಗ್ರಾ.ಪಂ ಅಧ್ಯಕ್ಷೆ ಪಿ.ಎಂ.ಯಶೋಧ, ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್.ಕೃಷ್ಣಪ್ರಸಾದ್, ಸಹಾಯಕ ನಿಬಂಧಕ ಎಂ.ಇ.ಮೋಹನ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಉಪಸ್ಥಿತರಿದ್ದರು.
ಚೇರಂಬಾಣೆ ಸಹಕಾರ ಸಂಘದ ಹಿರಿಯ ಸಹಕಾರಿ ಕೊಟ್ಟುಕತ್ತೀರ ಎಂ.ಪೂವಯ್ಯ, ಮಾಜಿ ಅಧ್ಯಕ್ಷರುಗಳಾದ ಕೇಕಡ ಸುಗುಣ, ನಡುವಟ್ಟೀರ ಅನಂತ್, ಅಳಮಂಡ ಗಣಪತಿ, ಎಸ್.ತಿಮ್ಮಯ್ಯ, ನೂತನ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ನೆರವು ದೊರಕಿಸಿಕೊಟ್ಟ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಕೊಡಂದೇರ ಪಿ.ಬಾಂಡ್ ಗಣಪತಿ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
::: ರೂ.82.11 ಲಕ್ಷ ವೆಚ್ಚದ ಕಟ್ಟಡ :::
ಕೇಂದ್ರ ಸರ್ಕಾರದ ಬಹುಸೇವಾ ಕೇಂದ್ರ (ಎಂ.ಎಸ್.ಸಿ) ಯೋಜನೆಯಡಿ ಸಂಘದ ನೂತನ ಕಟ್ಟಡ, ಗೋದಾಮು ಹಾಗೂ ಸಭಾಭವನ ರೂ.82.11 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದೆ. ಪ್ರಧಾನಮಂತ್ರಿಗಳ ಆತ್ಮ ನಿರ್ಭರ ಯೋಜನೆಯಡಿ ನಬಾರ್ಡ್‍ನಿಂದ ರೂ.65 ಲಕ್ಷ, ಸಂಘದ ಕ್ಷೇಮನಿಧಿಯಿಂದ ರೂ.10 ಲಕ್ಷ ಹಾಗೂ ಸಂಘದ ಕಟ್ಟಡ ನಿಧಿಯಿಂದ ರೂ.7.11 ಲಕ್ಷ ಬಳಸಿಕೊಳ್ಳಲಾಗಿದೆ.
ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರ ಅನುದಾನ ರೂ.3 ಲಕ್ಷದಲ್ಲಿ ಸಭಾಭವನದ ಟೈಲ್ಸ್ ಕಾಮಗಾರಿ ಮಾಡಲಾಗಿದೆ. ಸಂಘದ ರೂ.6.20 ಲಕ್ಷ ವೆಚ್ಚದಲ್ಲಿ ಭದ್ರತಾ ಕೊಠಡಿ ಮತ್ತು ಸದಸ್ಯರಿಗೆ ಸೇಫ್ ಲಾಕರ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸದಸ್ಯರ ಡಿವಿಡೆಂಟ್ ಹಣ ರೂ.6.31 ಲಕ್ಷ ವೆಚ್ಚದಲ್ಲಿ ಕಚೇರಿ ಪೀಠೋಪಕರಣ ಮತ್ತು ಒಳಾಂಗಣ ಕೆಲಸಕ್ಕೆ ಬಳಸಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಪಿ.ಸುಮನ್ ಮಾಹಿತಿ ನೀಡಿದರು.
Breaking News
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*