ಮಡಿಕೇರಿ ಜ.31 : ಕನ್ನಡದ ಖ್ಯಾತ ಕತೆಗಾರ, ಕವಿ, ವಿಮರ್ಶಕ, ಕೆ.ವಿ.ತಿರುಮಲೇಶ್ ಹಾಗೂ ಕೊಡಗಿನ ಹಿರಿಯ ಸಾಹಿತಿ, ನಿವೃತ್ತ ಶಿಕ್ಷಕ ಕೆ.ಕೇಶವಭಟ್ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಇಬ್ಬರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್ ಸಂತಾಪ ವ್ಯಕ್ತಪಡಿಸಿದರು.













