ಮಡಿಕೇರಿ ಜ.31 : ಚುನಾವಣೆ ಸಂಬಂಧ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಮಡಿಕೇರಿ ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ಹೆಚ್.ಡಿ.ಕೋಟೆ ತಾಲ್ಲೂಕಿಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಕುಂದಾಪುರದ ಕಿರಣ್ ಗೌರಯ್ಯ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಶೀಲ್ದಾರ್ ರನ್ನಾಗಿ ಹೊಸನಗರದ ರಾಜೀವ್ ವಿ.ಎಸ್ ಅವರನ್ನು ಸರ್ಕಾರ ನಿಯೋಜಿಸಿದೆ.











