ಮಡಿಕೇರಿ ಜ.31 : ಪದ್ಮಶ್ರೀ ಪುರಸ್ಕೃತ ಕೊಡಗಿನ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಫೆ.3 ರಂದು ಸನ್ಮಾನಿಸಿ ಗೌರವಿಸಲಾಗುವುದೆಂದು ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.45 ಗಂಟೆಗೆ ರಾಣಿ ಮಾಚಯ್ಯ ಅವರನ್ನು ನಗರದ ಎವಿ ಶಾಲೆ ಬಳಿಯಿಂದ ತೆರೆದ ಜೀಪ್‍ನಲ್ಲಿ ಮೆರವಣಿಗೆ ಮೂಲಕ ಕರೆ ತಂದು ಕೊಡವ ಸಮಾಜದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಕೊಡವ ಸಮಾಜದ ಅಧೀನದಲ್ಲಿರುವ 12 ಕೇರಿಗಳ ಸದಸ್ಯರು, ಪೊಮ್ಮಕ್ಕಡ ಕೂಟದ ಪ್ರಮುಖರು ಪಾಲ್ಗೊಳ್ಳಲಿದ್ದು, ಜನಾಂಗ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.
ಜಾನಪದ ಕ್ಷೇತ್ರದಲ್ಲಿ ಕೊಡಗಿನ ಸಂಸ್ಕೃತಿಯನ್ನು ದೇಶ ವಿದೇಶದಲ್ಲಿ ಪಸರಿಸಿದ ಕೀರ್ತಿ ರಾಣಿಮಾಚಯ್ಯ ಅವರಿಗೆ ಸಲ್ಲುತ್ತದೆ. ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವ ಸಲ್ಲಿಸುತ್ತಿರುವುದು ಕೊಡಗಿಗೆ ಹಾಗೂ ಜನಾಂಗಕ್ಕೆ ಹೆಮ್ಮೆಯ ವಿಚಾರ ಎಂದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಹಾಗೂ ನಿರ್ದೇಶಕಿ ಕಾಂಡೇರ ಲಲ್ಲು ಕುಟ್ಟಪ್ಪ ಉಪಸ್ಥಿತರಿದ್ದರು.
Breaking News
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*