ಸುಂಟಿಕೊಪ್ಪ,ಜ.31: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಷಿಯನ್ ವತಿಯಿಂದ 12ನೇ ವರ್ಷದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಫೆ.18 ಮತ್ತು 19 ರಂದು ಕೆದಮೂಳ್ಳೂರಿನಲ್ಲಿ ನಡೆಯಲಿದೆ.
ಸುಂಟಿಕೊಪ್ಪ ದ್ವಾರಕ ಹೋಟೆಲ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಶಿಯೇಷನ್‍ನ ಅಧ್ಯಕ್ಷರಾದ ಎಸ್.ಎಂ.ಡಿಸಿಲ್ವಾ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆ ಹಾಗೂ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿರಾಜಪೇಟೆಯ ಕೆದುಮಳ್ಳೂರು ಫಾತಿಮಾ ಮಾತೆ ದೇವಾಲಯ ಸಂಯುಕ್ತಾಶ್ರಯದಲ್ಲಿ ಕ್ರಿಕೆಟ್ ಹಾಗೂ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಟ 12ನೇ ಕ್ರೀಡಾಕೂಟವನ್ನು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಯಿತು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮಸ್ಥಾನ ಪಡೆದ ತಂಡಕ್ಕೆ ಟ್ರೋಫಿ ಹಾಗೂ 25,000 ನಗದು, ದ್ವಿತೀಯ ಸ್ಥಾನಗಳಿಸಿದ ತಂಡಕ್ಕೆ 15,000 ರೂ ಟ್ರೋಫಿ, ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡಕ್ಕೆ 3,000 ರೂ.ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಗಳಿಸಿದ ತಂಡಕ್ಕೆ ರೂ.1,500 ಹಾಗೂ ಟ್ರೋಫಿಯನ್ನು ನೀಡಲಾಗುವುದು.
ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕ ಪತ್ರವನ್ನು ಮಂಡಿಸಲಾಯಿತು. ನೂತನ ಸಾಲಿನ ಅಧ್ಯಕ್ಷರಾಗಿ ಎಸ್.ಎಂ.ಡಿಸಿಲ್ವಾ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಫ್.ಸಬಾಸ್ಟಿನ್ ಅವರನ್ನು ಸರ್ವಾನುಮತದಿಂದ ಪುನರಾಯ್ಕೆ ಮಾಡಲಾಯಿತು.
ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ನೊಂದಾವಣೆಗೆ ಮತ್ತು ಮಾಹಿತಿಗಾಗಿ ಸುದೀಫ್ ಡಿಸೋಜ 9740286065, ಸುನಿಲ್ ಲೋಪೆಸ್ 8296709260, ವಿನುಮಿರಾಂದ 9535502074, ದಿವಾನ್ ಪೀಟರ್ ಮನೆಜೆಸ್ 7259136398, ನಿಶಾಂತ್ ಮೊರೆಸ್ 9535032929 ಅವರುಗಳನ್ನು ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*
- *ಫೋಟೋಗ್ರಫಿ ಮತ್ತು ವೀಡಿಯೋಗ್ರಪಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
- *ನಕಲಿ ಪರಿಸರವಾದಿಗಳ ವಿರುದ್ಧ ಕ್ರಮಕ್ಕೆ ಸೇವ್ ಕೊಡಗು ಒತ್ತಾಯ*
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*