ಮಡಿಕೇರಿ ಜ.31 : 2023-24 ನೇ ಸಾಲಿನಲ್ಲಿ ಮಡಿಕೇರಿ ನಗರಸಭೆ ಆಯವ್ಯಯ ತಯಾರಿಸುವ ಸಂಬಂಧ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಪಡೆಯಲು ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಚುನಾಯಿತ ಸ್ಥಳೀಯ ಮಾಜಿ ಜನಪ್ರತಿನಿಧಿಗಳು ಹಾಗೂ ಆಸಕ್ತಿಯಳ್ಳ ಸಾರ್ವಜನಿಕರು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಪೌರಾಯುಕ್ತರಾದ ವಿಜಯ್ ಅವರು ಕೋರಿದ್ದಾರೆ.









