ನಾಪೋಕ್ಲು ಫೆ.1 : ನಾಪೋಕ್ಲು ಕೊಡವ ಸಮಾಜ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ಈ ರಸ್ತೆಯಲ್ಲಿ ನಿಲ್ಲುತ್ತಿರುವ ಕೊಳಚೆ ನೀರು ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಪೋಕ್ಲು ಪಂಚಾಯಿತಿ ಈ ಬಗ್ಗೆ ಗಮನಹರಿಸಿ ರಸ್ತೆಯ ಗುಂಡಿಯನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೆ ವಾಹನಗಳ ನಿಲುಗಡೆ ವ್ಯವಸ್ಥೆಯನ್ನು ಸುಗಮಗೊಳಿಸಲು ಪೊಲೀಸ್ ಇಲಾಖೆ ಸೂಕ್ತ ಯೋಜನೆಯನ್ನು ರೂಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ









