ವಿರಾಜಪೇಟೆ ಫೆ.1 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪ್ರೊ. ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಂ.ಎನ್.ಹೇಮಂತ್ ಮಂಡಿಸಿದ ಕೊಡವ ಹಾಗೂ ತುಳು ಸಂಸ್ಕೃತಿಗಳ ತೌಲನಿಕ ಅಧ್ಯಯನ ಎಂಬ ಸಂಶೋಧನಾ ವಿಷಯಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.
ಆ ಪ್ರಯುಕ್ತ ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಕರ್ ಹಾಗೂ ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ರೆ. ಫಾ. ಐಸಾಕ್ ರತ್ನಕರ್ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹೇಮಂತ್ ಅವರಿಗೆ ಡಾಕ್ಟರೇಟ್ ಪದವಿ ದೊರಕಿರುವುದು ಸಂತಸ ತಂದಿದೆ. ಇಡೀ ವಿದ್ಯಾಸಂಸ್ಥೆಗೆ ಹೆಮ್ಮೆ ಎಂದರು.