ಮಡಿಕೇರಿ ಫೆ.1 : ಆಟೋ ಮಾಲೀಕರು ಮತ್ತು ಚಾಲಕರ ಸಂಘ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ 1 ಲಕ್ಷ ರೂ. ದೇಣಿಗೆ ನೀಡುವುದಾಗಿ ಪುಸ್ತಕದಲ್ಲಿ ಬರೆದು ಭರವಸೆ ನೀಡಿದ್ದ ರಾಜಕಾರಣಿಯೊಬ್ಬರು ನಂತರ ಹಣ ನೀಡದೆ ಸತಾಯಿಸಿದ್ದಾರೆ ಎಂದು ಕೊಡಗು ಜಿಲ್ಲಾ ಹಾಗೂ ಮಡಿಕೇರಿ ನಗರ ಆಟೋ ಮಾಲೀಕರು ಮತ್ತು ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ಜ.26 ರಂದು ಕ್ರೀಡಾಕೂಟ ಮತ್ತು ಡ್ಯಾನ್ಸ್ ಮೇಳವನ್ನು ಆಯೋಜಿಸಲಾಗಿತ್ತು. ಇದಕ್ಕೆ 1 ಲಕ್ಷ ರೂ. ನೀಡುವುದಾಗಿ ಜಿಲ್ಲೆಯ ರಾಜಕಾರಣಿಯೊಬ್ಬರು ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಅವರಿಂದ ಹಣ ಬಂದಿರುವುದಿಲ್ಲವೆAದು ಬೇಸರ ವ್ಯಕ್ತಪಡಿಸಿದರು.
ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದ ಕಾರಣ ಹಣದ ಅವಶ್ಯಕತೆ ಇತ್ತು, ಆದರೆ ಈ ರಾಜಕಾರಣಿಯ ಭರವಸೆ ಹುಸಿಯಾದ ನಂತರ ಅನಿವಾರ್ಯವಾಗಿ ನಾವು ವರ್ತಕರು ಹಾಗೂ ಸಾರ್ವಜನಿಕರಿಂದ ಆರ್ಥಿಕ ನೆರವು ಕೋರಬೇಕಾಯಿತು. ಇದಕ್ಕೆ ಉತ್ತಮ ಸ್ಪಂದನೆ ದೊರೆತು ಕಾರ್ಯಕ್ರಮವೂ ಯಶಸ್ವಿಯಾಯಿತು. ಆದರೆ ಹುಸಿ ಭರವಸೆ ನೀಡಿದ ರಾಜಕಾರಣಿಯಿಂದ 1 ಲಕ್ಷ ರೂ. ದೊರೆತ್ತಿದೆ ಎನ್ನುವ ಊಹಾಪೋಹಗಳು ಕೇಳಿ ಬರುತ್ತಿದ್ದು, ಇಲ್ಲಿಯವರೆಗೆ ಯಾವುದೇ ಹಣ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ರೀತಿಯ ಪೊಳ್ಳು ಭರವಸೆಯ ರಾಜಕಾರಣಿಗಳು ಗೆದ್ದು ಬಂದರೆ ಸಾರ್ವಜನಿಕರ ಗತಿಯೇನು ಎಂದು ಪ್ರಶ್ನಿಸಿದ ಮೇದಪ್ಪ ಅವರು, ಯುವ ರಾಜಕಾರಣಿ ಹಾಗೂ ಸಮಾಜ ಸೇವಕ ಡಾ.ಮಂತರ್ ಗೌಡ ಅವರು ನುಡಿದಂತೆ ನಡೆದುಕೊಂಡಿದ್ದು, ಧನ ಸಹಾಯ ನೀಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಸಾರ್ವಜನಿಕರು ಹಾಗೂ ವರ್ತಕರು ನೀಡಿದ ಸಹಕಾರಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ಯಾರು ಕೂಡ ಪ್ರಚಾರ ಗಿಟ್ಟಿಸಿಕೊಳ್ಳುವುದಕ್ಕಾಗಿ ಆರ್ಥಿಕ ನೆರವಿನ ಪೊಳ್ಳು ಭರವಸೆಗಳನ್ನು ನೀಡಬಾರದು, ಇದರಿಂದ ಕಾರ್ಯಕ್ರಮದ ಆಯೋಜಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಪ್ರಸನ್ನ ಪಳಂಗಪ್ಪ, ನಗರಾಧ್ಯಕ್ಷ ಎ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಸಿ.ಬಾರನ ದಿನೇಶ್, ಉಪಾಧ್ಯಕ್ಷ ಎ.ಸಮದ್ ಹಾಗೂ ಸಂಘಟನಾ ಕಾರ್ಯದರ್ಶಿ ಎ.ಎನ್.ಹರೀಶ್ ಉಪಸ್ಥಿತರಿದ್ದರು.
Breaking News
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*
- *ಫೋಟೋಗ್ರಫಿ ಮತ್ತು ವೀಡಿಯೋಗ್ರಪಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
- *ನಕಲಿ ಪರಿಸರವಾದಿಗಳ ವಿರುದ್ಧ ಕ್ರಮಕ್ಕೆ ಸೇವ್ ಕೊಡಗು ಒತ್ತಾಯ*
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*