ಮಡಿಕೇರಿ ಫೆ.1 : ನಗರದ ಸುದರ್ಶನ ಬಡಾವಣೆಯ ಮುನೀಶ್ವರ ಯುವಕ ಸಂಘದ ವತಿಯಿಂದ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಸಹಕಾರದೊಂದಿಗೆ ಶಿವರಾತ್ರಿಯ ದಿನವಾದ ಫೆ.18 ರಂದು ನಗರದಲ್ಲಿ ಹೊನಲು ಬೆಳಕಿನ ‘ಎಆರ್‌ಎಸ್ ಸ್ಮರಣಾರ್ಥ ಕಬಡ್ಡಿ-2023’ ಪಂದ್ಯಾವಳಿ ನಗರದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ ಪಂದ್ಯಾವಳಿ ಮುನೀಶ್ವರ ದೇವಸ್ಥಾನದ ಮೈದಾನದಲ್ಲಿ ಅಂದು ರಾತ್ರಿ 7 ಗಂಟೆಗೆ ಮ್ಯಾಟ್£ಲ್ಲಿ ನಡೆಯಲಿದೆಯೆಂದು ತಿಳಿಸಿದರು.
ಇತ್ತೀಚೆಗೆ ನಮ್ಮನ್ನು ಅಗಲಿದ ಬಡಾವಣೆೆಯ ನಿವಾಸಿಗಳಾದ ಪಂದಿಯoಡ ಆಶಾ, ರೋಶನ್ ಶೆಟ್ಟಿ ಹಾಗೂ ಶಶಾಂಕ್ ಅವರ ನೆನಪಿನಲ್ಲಿ ಎಆರ್‌ಎಸ್ ಸ್ಮರಣಾರ್ಥ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾವಳಿಯಲ್ಲಿ ರಾಜ್ಯ ಮತ್ತು ಹೊರ ರಾಜ್ಯ ತಂಡಗಳ ಪಾಲ್ಗೊಳ್ಳುವಿಕೆಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.
ಅಮೆಚೂರು ಕಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಕಪಿಲ್ ದುಗ್ಗಳ ಮಾತನಾಡಿ, ಪಂದ್ಯಾವಳಿಯಲ್ಲಿ ಮೊದಲು ಹೆಸರು ನೋಂದಾಯಿಸಿಕೊಳ್ಳುವ 24 ತಂಡಗಳಿಗೆ ಅವಕಾಶವನ್ನು ನೀಡಲಾಗಿದೆ. ಆಸಕ್ತ ತಂಡಗಳು 2 ಸಾವಿರ ಪ್ರವೇಶ ಶುಲ್ಕದೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9448224983, 9448587975, 9591791671, 9902612740 ವನ್ನು ಸಂಪರ್ಕಿಸಬಹುದೆAದು ತಿಳಿಸಿದರು.
ನಾಕ್ ಔಟ್ ಮಾದರಿಯಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ 50 ಸಾವಿರ ರೂ. ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 30 ಸಾವಿರ ರೂ. ಮತ್ತು ಟ್ರೋಫಿ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಿಗೆ ತಲಾ 10 ಸಾವಿರ ರೂ. ಮತ್ತು ಟ್ರೋಫಿಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಂ.ಕೆ.ಕಾವೇರಪ್ಪ, ಪದಾಧಿಕಾರಿಗಳಾದ ಎಂ.ಎ.ಸತೀಶ್, ಎನ್.ಎನ್.ಕೌಶಿಕ್ ಹಾಗೂ ಬಿ.ಜೆ.ಮನೋಜ್ ಶೆಟ್ಟಿ ಉಪಸ್ಥಿತರಿದ್ದರು.











