ಕುಶಾಲನಗರ, ಫೆ.1 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.3 ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿರುವ ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಆರ್.ನಾರಾಯಣ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಹ್ವಾನಿಸಲಾಯಿತು.
ಸಮ್ಮೇಳನಾಧ್ಯಕ್ಷ ಬಿ.ಆರ್.ನಾರಾಯಣ ಅವರಿಗೆ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಮೂರ್ತಿ ,ಸಮ್ಮೇಳನದ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದರು.
ಕುಶಾಲನಗರ ತಾಲ್ಲೂಕು ರಚನೆಯಾದ ನಂತರ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಕಸಾಪ ಅಧ್ಯಕ್ಷ ಮೂರ್ತಿ ಮನವಿ ಮಾಡಿದರು.
ನಿಯೋಜಿತ ಸಮ್ಮೇಳನಾಧ್ಯಕ್ಷ ಬಿ.ಆರ್.ನಾರಾಯಣ ಮಾತನಾಡಿ, ಜಿಲ್ಲೆಯ ವಾಣಿಜ್ಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ನಗರಿ ಎನಿಸಿರುವ ಕುಶಾಲನಗರದಲ್ಲಿ ತಾಲ್ಲೂಕು ರಚನೆಯಾದ ನಂತರ ನಡೆಯುತ್ತಿರುವ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ನಾಡಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಬಗ್ಗೆ ಹೊಸ ತಲೆಮಾರಿನ ಪ್ರತಿಭೆಗಳಿಗೆ ಪರಿಚಯ ಮಾಡಬೇಕಿದೆ. ಸಾಹಿತ್ಯ ಸಮ್ಮೇಳನಗಳು ಕನ್ನಡಿಗರ ಅಸ್ಮಿತೆಯ ಪ್ರದರ್ಶನದೊಂದಿಗೆ ಕನ್ನಡ ನಾಡು- ನುಡಿ ಭಾಷಾ ಬೆಳವಣಿಗೆ ಮೂಲಕ ಕನ್ನಡ ಮನಸ್ಸುಗಳನ್ನು ಒಟ್ಟುಗೂಡಿಸುವಂತಾಗಲಿ ಎಂದರು.
ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ, ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಗೌರವ ಕಾರ್ಯದರ್ಶಿಗಳಾದ
ಎಸ್.ನಾಗರಾಜ್, ಟಿ.ವಿ.ಶೈಲಾ, ಗೌರವ ಕೋಶಾಧಿಕಾರಿ ಕೆ.ವಿ.ಉಮೇಶ್, ಪದಾಧಿಕಾರಿಗಳಾದ ಎಂ.ಎನ್.ಕಾಳಪ್ಪ, ಬಿ.ಬಿ.ಹೇಮಲತಾ, ಎನ್.ಮೋಹನ್ ಕುಮಾರ್, ಎಚ್.ಎನ್. ಸುಬ್ರಮಣ್ಯ ಇತರರು ಇದ್ದರು.