ಮಡಿಕೇರಿ ಫೆ.1 : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಡಿ ನಕಲಿ ದಾಖಲಾತಿ ಸೃಷ್ಠಿಸಿ, ಫಲಾನುಭವಿಗಳೆಂದು ನೋಂದಾಯಿತರಾಗಿ ಕಾರ್ಮಿಕರಲ್ಲದವರು ವಿವಿಧ ಧನಸಹಾಯದ ಸೌಲಭ್ಯಗಳನ್ನು ಪಡೆಯುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿರುತ್ತದೆ.
ಇವರ ನೋಂದಣಿಯನ್ನು ರದ್ದು ಮಾಡುವಂತೆ ಹಾಗೂ ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಲು ಫೆಬ್ರವರಿ, 25 ರವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ ಹಮ್ಮಿಕೊಂಡು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಆದ್ದರಿಂದ ಕೊಡಗು ಜಿಲ್ಲೆಯಲ್ಲಿ ಫೆಬ್ರವರಿ, 25 ರವರೆಗೆ ನಕಲಿ ದಾಖಲಾತಿ ಸೃಷ್ಠಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಕಾರ್ಡ್‍ಗಳನ್ನು ರದ್ದುಪಡಿಸಲು ‘ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ’ ನಡೆಯಲಿದೆ.
ಈ ಅಭಿಯಾನ ದಿನಗಳಲ್ಲಿ ನಕಲಿ ದಾಖಲಾತಿ ಸೃಷ್ಠಿಸಿ ಗುರುತಿನ ಚೀಟಿ ಪಡೆದಿರುವ ಫಲಾನುಭವಿಗಳು ತಮ್ಮ ಸ್ವ-ಇಚ್ಚೆಯಿಂದ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಕಚೇರಿಗೆ ತಮ್ಮ ಗುರುತಿನ ಚೀಟಿಗಳನ್ನು ಹಿಂದಿರುಗಿಸಿದಲ್ಲಿ ಮುಂದಿನ ಕಾನೂನು ಕ್ರಮವನ್ನು ಕೈಬಿಡಲಾಗುವುದು. ಒಂದು ವೇಳೆ ಈ ಅಭಿಯಾನ ಅವಧಿಯ ಒಳಗೆ ಕಟ್ಟಡ ಕಾರ್ಮಿಕರಲ್ಲದವರು ತಮ್ಮ ಗುರುತಿನ ಚೀಟಿಗಳನ್ನು ಹಿಂದಿರುಗಿಸದ ಪಕ್ಷದಲ್ಲಿ ಮಂಡಳಿಯ ನಿಯಾಮಾನುಸಾರ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅನಿಲ ಬಗಟಿ ಅವರು ತಿಳಿಸಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*