ಮಡಿಕೇರಿ ಫೆ.1 : ಮುಂದಿನ 25 ವರ್ಷಗಳಲ್ಲಿ ಆರ್ಥಿಕವಾಗಿ ಭಾರತವನ್ನು ವಿಶ್ವದ 3 ನೇ ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡುವ ಭವಿಷ್ಯದ ಬಜೆಟ್ ಇದಾಗಿದೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಾಲೋಚನೆಯಿಂದ ಬಜೆಟ್ ನ್ನು ರೂಪಿಸಲಾಗಿದೆ. ರೈತರು ಹಾಗೂ ಮಧ್ಯಮ ವರ್ಗದ ಏಳಿಗೆಗೆ ಆದ್ಯತೆ ನೀಡಲಾಗಿದೆ.
ಮಾನವ ರಹಿತ ತಾಂತ್ರಿಕತೆ ಮತ್ತು ಕೃತಕ ಬುದ್ಧಿ ಮತ್ತೆಯ ಯೋಜನೆಗೆೆ ಬಜೆಟ್ ನಲ್ಲಿ ಪ್ರೋತ್ಸಾಹ ನೀಡಲಾಗಿದ್ದು, ದೇಶಾದ್ಯಂತ ಇದಕ್ಕೆ ಸಂಬಂಧಿಸಿದ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೆತ್ತಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಒಟ್ಟಿನಲ್ಲಿ ಕೇಂದ್ರದ ಬಜೆಟ್ ಭವ್ಯ ಭಾರತದ ನಿರ್ಮಾಣಕ್ಕೆ ಪೂರಕವಾಗಿದೆ. (( ತೇಲಪಂಡ ಶಿವಕುಮಾರ್ ನಾಣಯ್ಯ, ಸದಸ್ಯರು, ಕಾರ್ಯಕಾರಿ ಸಮಿತಿ, ಕೊಡಗು ಜಿಲ್ಲಾ ಬಿಜೆಪಿ ))









