ಮಡಿಕೇರಿ ಫೆ.2 : ಪೋಷಣ್ ಅಭಿಯಾನ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಡಿಕೇರಿ ತಾಲ್ಲೂಕು ಸಂಯೋಜಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಮಾಸಿಕ ಗೌರವಧನ ರೂ.20 ಸಾವಿರ ನಿಗದಿಪಡಿಸಿ ಮಡಿಕೇರಿ ತಾಲ್ಲೂಕಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಷಯಾಧಾರಿತ ಪದವಿ ಹೊಂದಿದ್ದು, ಟೆಕ್ನಾಲಜಿ ಅಂಡ್ ಸಾಪ್ಟ್‌ವೇರ್ ಅಪ್ಲಿಕೇಷನ್ ಸಪೋರ್ಟ್‍ನಲ್ಲಿ 2 ವರ್ಷ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಮಾತನಾಡುವ ಮತ್ತು ಬರೆಯುವ ಪ್ರಾವೀಣ್ಯತೆ ಹಾಗೂ ಕ್ಷೇತ್ರ ಕಾರ್ಯ ನಿರ್ವಹಣೆಗೆ ಸಿದ್ಧರಿರಬೇಕು. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು ಮತ್ತು ಅನುಭವ ಪ್ರಮಾಣ ಪತ್ರಗಳೊಂದಿಗೆ ಫೆಬ್ರವರಿ, 13 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ(ದೂ.ಸಂ.08272-298379) ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ತಿಳಿಸಿದ್ದಾರೆ.














