ಸುಂಟಿಕೊಪ್ಪ ಫೆ.2 : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.14 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅನಿರ್ಧಿಷ್ಟ ಮುಷ್ಕರ ನಡೆಯಲಿದ್ದು, ಮುಷ್ಕರದ ಭಿತ್ತಿಪತ್ರವನ್ನು ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಭರತ್ ಕುಮಾರ್ ಬಿಡುಗಡೆ ಮಾಡಿದರು.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಭಿತ್ತಿಪತ್ರಗಳನ್ನು ನೀಡಿದರು.
ನಂತರ ಮಾತನಾಡಿದ ಅವರು ಗ್ರಾ.ಪಂ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಅಪರೇಟರ್, ನೀರುಗಂಟಿಗಳನ್ನು, ಸ್ವಚ್ಛತಾ ಸಿಬ್ಬಂದಿಗಳನ್ನು ಸರಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನನಿತ್ಯದ ಬೆಲೆ ಏರಿಕೆ ಅನುಸಾರವಾಗಿ ಕನಿಷ್ಟ ವೇತನ ರೂ.25,000 ನಿಗದಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದರು.