ಮಡಿಕೇರಿ ಫೆ.2 ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.3 ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿದೆ.
ಫೆಬ್ರವರಿ, 3 ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಕುಶಾಲನಗರ ಪುರಸಭೆ ಅಧ್ಯಕ್ಷರಾದ ಬಿ.ಜಯವರ್ಧನ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಇತರರು ಪಾಲ್ಗೊಳ್ಳಲಿದ್ದಾರೆ.
ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಲಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ನಾಡಗೀತೆ ಹಾಡಲಿದ್ದಾರೆ. ಬಳಿಕ ಗಣ್ಯರ ನೆನಪಿನ ದ್ವಾರಗಳ ಉದ್ಘಾಟನೆ,
ಸಮ್ಮೇಳನದ ಉದ್ಘಾಟನಾ ಸಮಾರಂಭವು ಫೆಬ್ರವರಿ, 03 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಸುಜಾ ಕುಶಾಲಪ್ಪ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಇತರರು ಪಾಲ್ಗೊಳ್ಳಲಿದ್ದಾರೆ.







