ಮಡಿಕೇರಿ ಫೆ.2 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ, 3 ರಿಂದ 6 ರವರೆಗೆ ನಗರದ ರಾಜಸೀಟು ಉದ್ಯಾನವನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ.
ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಫೆಬ್ರವರಿ, 03 ರಂದು ಸಂಜೆ 4 ಗಂಟೆಗೆ ರಾಜಸೀಟು ಉದ್ಯಾನವನದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ತೋಟಗಾರಿಕೆ ಮತ್ತು ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಎನ್.ಮುನಿರತ್ನ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ತೋಟಗಾರಿಕೆ ಇಲಾಖೆಯ ನಿರ್ದೇಶಕರಾದ ಕೆ.ನಾಗೇಂದ್ರ ಪ್ರಸಾದ್, ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಕೊಡಗು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಮಾಚೇಟ್ಟಿರ ಚೋಟು ಕಾವೇರಪ್ಪ, ಬೆಂಗಳೂರು ಲಾಲ್‍ಬಾಗ್‍ನ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಎಚ್.ಎಸ್.ಶಿವಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಕೆ.ಎಂ.ಪರಶಿವಮೂರ್ತಿ, ತೋಟಗಾರಿಕೆ ಅಪರ ನಿರ್ದೇಶಕರಾದ (ತಾಳೆಬೆಳೆ) ಡಾ.ಪ್ರಕಾಶ್ ಎಂ.ಸೊಬರದ, ತೋಟಗಾರಿಕೆ ಅಪರ ನಿರ್ದೇಶಕರಾದ (ಹಣ್ಣುಗಳು) ಡಾ.ಕೆ.ಬಿ.ದುಂಡಿ, ಬೆಂಗಳೂರು ಲಾಲ್‍ಬಾಗ್ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಡಾ.ಕದಿರೇಗೌಡ, ಬೆಂಗಳೂರು ಲಾಲ್‍ಬಾಗ್ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಡಾ.ಆಕಾಶ್ ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*