ವಿರಾಜಪೇಟೆ ಫೆ.2 : ವಿರಾಜಪೇಟೆಯ ಖಾಸಗಿ ಬಸ್ಸು ನಿಲ್ದಾಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತಿದ್ದ 60 ವರ್ಷದ ವೃದ್ಧೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.
2022 ಡಿ.25 ರಂದು ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸೇರಿಸುವ ಸಂದರ್ಭ ಹೆಸರನ್ನು ಪ್ರೇಮ ಎಂದು ದಾಖಲಿಸಿಕೊಳ್ಳಲಾಗಿದೆ. ಶವವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರು ಯಾರೆಂದು ತಿಳಿದಿಲ್ಲ.
ಮೃತರ ಮಾಹಿತಿ ತಿಳಿದು ಬಂದಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣೆ 08274-257333 ಮತ್ತು ನಗರ ಠಾಣಾಧಿಕಾರಿ 9480804955 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.








