ಸೋಮವಾರಪೇಟೆ ಫೆ.3 : ತಾಲ್ಲೂಕಿನಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ ಮೂವರು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.
ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಐಗೂರು ಸರಕಾರಿ ಪ್ರೌಢಶಾಲೆಯ ಸ್ನೇಹಾ, ನೆಲ್ಲಿಹುದಿಕೇರಿ ಪ್ರೌಢಶಾಲೆಯ ಅಸ್ಮಿಯಾ, ಅಂಕನಳ್ಳಿ ಪ್ರೌಢಶಾಲೆಯ ಅಭಿಷೇಕ್ ಅವರುಗಳಿಗೆ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.
ಈ ಸಂದರ್ಭ ತಹಶೀಲ್ದಾರ್ ಎಸ್.ಎನ್.ನರಗುಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ರಾಷ್ಟ್ರೀಯ ಹಬ್ಬಗಳ ಸಮಿತಿ ಉಪಾಧ್ಯಕ್ಷರಾದ ಎಂ.ಬಿ.ಅಭಿಮನ್ಯು ಕುಮಾರ್ ಇದ್ದರು.









