ಮಡಿಕೇರಿ ಫೆ.3 : ದಕ್ಷಿಣ ಕೊಡಗಿನಲ್ಲಿ ಹುಲಿ ಆತಂಕ ಮುಂದುವರೆದಿದ್ದು, ಸಾಲು ಸಾಲು ಜಾನುವಾರುಗಳು ಬಲಿಯಾಗುತ್ತಿವೆ. ತೂಚಮಕೇರಿ ಗ್ರಾಮದ ಪುಟ್ಟಂಗಡ ಚೇತನ್ ಎಂಬುವವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ.
15 ದಿನಗಳ ಹಿಂದೆಯಷ್ಟೆ ಬಲ್ಯಮಂಡೂರು ಗ್ರಾಮದ ಚೇಂದಿರ ಸುರೇಶ್ ಅವರ ಎಮ್ಮೆಯನ್ನು ಹುಲಿ ಬಲಿ ಪಡೆದಿತ್ತು. ಕಳೆದ ವರ್ಷ ಕೂಡ ಚೇತನ್ ಅವರಿಗೆ ಸೇರಿದ ಹಸುವೊಂದನ್ನು ಹುಲಿ ಕೊಂದು ಹಾಕಿತ್ತು. ಈ ಭಾಗದಲ್ಲಿ ಹುಲಿ ಉಪಟಳ ನಿರಂತರವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಅಧಿಕಾರಿಗಳು ಹುಲಿ ಸೆರೆಗೆ ಬೋನ್ ಅಳವಡಿಸಲು ಕ್ರಮ ಕೈಗೊಂಡಿದ್ದಾರೆ. ಹಸುಗಳ ಮಾಲೀಕರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಒತ್ತಾಯಿಸಿದರು.
ಮಾಯಮುಡಿಯ ರುದ್ರಬೀಡು ಎಂಬಲ್ಲಿ ಮತ್ತೊಂದು ಹಸುವನ್ನು ಹುಲಿ ಕೊಂದು ಹಾಕಿದೆ. ದಕ್ಷಿಣ ಕೊಡಗಿನ ಹುಲಿ ಉಪಟಳದ ಭಾಗಗಳಲ್ಲಿ ಕಾರ್ಮಿಕರು ಕಾಫಿ ತೋಟಗಳಿಗೆ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಾಫಿ ಕೊಯ್ಲಿನ ಸಮಯವಾಗಿರುವುದರಿಂದ ಬೆಳೆಗಾರರು ಅತಂತ್ರ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*