ಮಡಿಕೇರಿ ಫೆ.3 : ವರ್ತಕರೊಬ್ಬರ ಮೊಬೈಲ್ ಫೋನ್ ಮೂಲಕ ಫೋನ್ ಪೇ ಮತ್ತು ಗೂಗಲ್ ಪೇ ಆಪ್ ನ್ನು ಬಳಸಿ ರೂ.4,76,456 ನ್ನು ಸ್ನೇಹಿತರ ಖಾತೆಗಳಿಗೆ ವರ್ಗಾಯಿಸಿಕೊಂಡ ಆರೋಪದಡಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾಲನಗರ ಸಮೀಪ ಗುಡ್ಡೆಹೊಸೂರುವಿನ ಬೊಳ್ಳೂರು ಗ್ರಾಮದ ನಿವಾಸಿ ನೂತನ್ ಬಿ.ಎಂ (23) ಬಂಧಿತ ಆರೋಪಿ. ಗುಮ್ಮನಕೊಲ್ಲಿಯ ದಿನಸಿ ಅಂಗಡಿಯ ವರ್ತಕರೊಬ್ಬರ ಪುತ್ರಿ ಅನುಷಾ ಎಂಬುವವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ನಿರೀಕ್ಷ ರಾಘವೇಂದ್ರ ಜೆ.ಕೆ ಹಾಗೂ ಪೊಲೀಸ್ ಉಪ ನಿರೀಕ್ಷಕ ದೇವರಾಜ್ ಹೆಚ್.ಇ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಸಾರ್ವಜನಿಕರು ಸೈಬರ್ ಅಪರಾಧಗಳ ಬಗ್ಗೆ ಎಚ್ಚರದಿಂದಿರಲು ಕೊಡಗು ಜಿಲ್ಲಾ ಸೈಬರ್ ಅಪರಾಧ ವಿಭಾಗ ಮನವಿ ಮಾಡಿದೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*