ಮಡಿಕೇರಿ ಫೆ.3 : ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚುರಂಜನ್ ಟ್ಯಾಬ್ ವಿತರಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ಹಾಗೂ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಜಿಲ್ಲಾ ಪಂಚಾಯತ್ನ ಶಾಸಕರ ಕಚೇರಿ ಆವರಣದಲ್ಲಿ ವಿತರಿಸಿದರು. ಮಡಿಕೇರಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು 50 ಟ್ಯಾಬ್ಗಳನ್ನು ಶಾಸಕದ್ವಯರು ವಿತರಿಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಕುಟುಂಬದ ಮಕ್ಕಳಿಗೆ ಟ್ಯಾಬ್ನ್ನು ವಿತರಿಸಲಾಗುತ್ತಿದ್ದು, ಈ ಸೌಲಭ್ಯವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವಂತೆ ಸಲಹೆ ಮಾಡಿದರು. ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಇತರರು ಇದ್ದರು.