ಮಡಿಕೇರಿ ಫೆ.3 : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಯು ಫೆಬ್ರವರಿ, 7 ಮತ್ತು 8 ರಂದು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.
ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿಯ ಕ್ರೀಡಾ ಪ್ರಾಧಿಕಾರದ ಹಾಕಿ ತಂಡಗಳು ಪಾಲ್ಗೊಳ್ಳಲಿವೆ. ಫೆಬ್ರವರಿ, 7 ರಂದು ಮಧ್ಯಾಹ್ನ 3 ಗಂಟೆಗೆ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ.
ಹಾಗೆಯೇ ಫೆಬ್ರವರಿ, 8 ರಂದು ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಅವರು ತಿಳಿಸಿದ್ದಾರೆ.







