ಚೆಯ್ಯಂಡಾಣೆ ಫೆ.3 : ಮೂರು ಶತಮಾನಗಳ ಇತಿಹಾಸವಿರುವ ಹಲವಾರು ಪವಾಡಗಳಿಗೆ ಹೆಸರಾದ ಎಡಪಾಲ ಅಂಡತ್ ಮಾನಿ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ ಸಮಾರಂಭವು ಈ ಬಾರಿ ಫೆ.5 ರಿಂದ 7ರ ವರೆಗೆ ವಿವಿಧ ಕಾರ್ಯಕ್ರಮ ಗಳೊಂದಿಗೆ ನಡೆಯಲಿದೆ ಎಂದು ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು. ಶಾಫಿ ತಿಳಿಸಿದ್ದಾರೆ.
ಫೆ.5 ರಂದು ಸಂಜೆ 4 ಗಂಟೆಗೆ ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಲಿಸಲಿದ್ದಾರೆ. ರಾತ್ರಿ ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.6 ರಂದು ಸಂಜೆ ಸನ್ಮಾನ ಹಾಗೂ ದುಆ ಮಜ್ಲಿಸ್ ನಡೆಯಲಿದ್ದು, ಸಯ್ಯದ್ ಹಮೀದಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೇತೃತ್ವ ವಹಿಸಲಿದ್ದಾರೆ. ಮುಖ್ಯ ಭಾಷಣವನ್ನು ಅಲ್ ಹಾಜ್ ಕೆ.ಎಂ. ಮೊಯ್ದು ಪೈಝಿ ಮಾಡಲಿದ್ದಾರೆ.
ರಾತ್ರಿ ಶಮೀರ್ ಆಶ್ರಫಿ ಕಾಟ್ಟಾ0ಪಳ್ಳಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.7ರಂದು ರಾತ್ರಿ ಉಸ್ತಾದ್ ಬಶೀರ್ ಪೈಝಿ ದೇಶ ಮಂಗಲಂ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ನಾಇಬ್ ಖಾಝಿ ಅಬ್ದುಲ್ಲ ಪೈಝಿ, ಮುದರ್ರಿಸ್ ನಿಝಾರ್ ಪೈಝಿ ಸೇರಿದಂತೆ ಧಾರ್ಮಿಕ ಪಂಡಿತರು, ಧರ್ಮಗುರುಗಳು,ಸಮಾಜ ಸೇವಕರು, ಜನಪ್ರತಿನಿಧಿಗಳು ಹಾಗೂ ಮತ್ತಿತ್ತರರು ಭಾಗವಹಿಸಲಿದ್ದಾರೆ.
ಫೆ.6 ಹಾಗೂ 7 ರಂದು ಎಲ್ಲಾ ಭಕ್ತಾದಿಗಳಿಗೆ ಅನ್ನದಾನ ನಡೆಯಲಿದೆ.
ವರದಿ : ಅಶ್ರಫ್