ಸೋಮವಾರಪೇಟೆ ಫೆ.3 : ಯುವ ಶಕ್ತಿ ರಾಷ್ಟ್ರದ ಸಂಪತ್ತಾಗಬೇಕಾದರೆ, ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಎಚ್.ಎನ್.ರಾಜು ನಿವೃತ್ತಿ ಹೊಂದಿದ ಕಾರಣ ಕಾಲೇಜಿನಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.
ಪ್ರಾಧ್ಯಾಪಕರು ಶ್ರದ್ಧೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಯ ಕಳೆಯಲು ಪಾಠ ಮಾಡಬಾರದು. ಗುರುಗಳು ವಿದ್ಯಾದಾನ ಮಾಡಬೇಕು. ಒಂದು ಸರ್ಕಾರಿ ಕಾಲೇಜು ಸಾಧನೆ ಮಾಡಬೇಕಾದರೆ ನಾಲ್ಕು ಚಕ್ರಗಳಾದ ಆಡಳಿತ ಮಂಡಳಿ, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನವಾಗಿ ಚಲಿಸಬೇಕು. ಹೊಂದಾಣಿಕೆ ಹಾಗು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಂಗ ವಿಭಾಗದ ಕುಲಪತಿ ಡಾ.ಪಿ.ಎಲ್.ಧರ್ಮ ಮಾತನಾಡಿ, ಪ್ರಾಧ್ಯಾಪಕರು, ಉಪನ್ಯಾಸಕರು, ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಉಪಯೋಗಿಕೊಂಡು ಗುಣಮಟ್ಟದ ಶಿಕ್ಷಣ ನೀಡುವುದು ಕರ್ತವ್ಯವಾಗಿದೆ. ಪ್ರತಿನಿತ್ಯ ಅಭ್ಯಾಸ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ, ಸಲಹೆಗಳೊಂದಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಎಚ್.ಎನ್.ರಾಜು 34 ವರ್ಷಗಳ ಕಾಲ ಕಾಲೇಜಿನಲ್ಲಿ ಪಾಠ ಮಾಡಿದ್ದು, ನನ್ನ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿದ್ದಾರೆ. ಉಪನ್ಯಾಸಕರ ಹುದ್ದೆಗಳು ಭರ್ತಿಯಾಗುವ ಕಾಲ ಕೂಡಿ ಬಂದಿದ್ದು, ಸರ್ಕಾರಿ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಸಿಗಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಎಸ್.ಮಹೇಶ್, ಸದಸ್ಯರಾದ ಎಂ.ಪಿ.ಗೋಪಾಲ್, ಎಸ್.ಆರ್.ಸೋಮೇಶ್, ಪ್ರಾಂಶುಪಾಲರಾದ ಸುನಿತಾ ಇದ್ದರು.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*