Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ರಾಜಾಸೀಟು ಉದ್ಯಾನವನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಇಲ್ಲೂ “ಕಾಂತಾರ” ಹವಾ…
ಇತ್ತೀಚಿನ ಸುದ್ದಿಗಳು

ರಾಜಾಸೀಟು ಉದ್ಯಾನವನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಇಲ್ಲೂ “ಕಾಂತಾರ” ಹವಾ…

February 3, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.3 :  ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಫೆಬ್ರವರಿ 6 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ.
ಅಲ್ಲಿನ ಪುಷ್ಪಗಳಿಂದ ನಿರ್ಮಾಣವಾಗಿರುವ ಕಲಾಕೃತಿಗಳು ಒಂದಕ್ಕೊಂದು ಗಮನ ಸೆಳೆಯುತ್ತಿವೆ. ನಾಲ್ಕುನಾಡು ಅರಮನೆ ಕಲಾಕೃತಿಯ ಚಿತ್ರದಲ್ಲಿ ರಾಜರು ಕುಳಿತಿರುವುದು, ಹಾಗೆಯೇ ಕೊಡವ ಉಡುಪಿನಲ್ಲಿ ಸ್ವಾಗತಿಸುವ ಚಿತ್ರಗಳು, ಸಿಂಡ್ರೆಲಾ, ಹಾಗೆಯೇ ವೈನ್‍ಕಪ್ ಒಳಗೊಂಡ ಚಿತ್ರಗಳು, ಹೆಸರು ಕಾಳು ಮತ್ತು ಬಿಳಿ ಎಳ್ಳು ಮೂಲಕ ಕ್ರೀಯಾಶೀಲವಾಗಿ ನಿರ್ಮಾಣ ಮಾಡಿರುವ ಸೈನಿಕ, ಹೀಗೆ ರಾಜಸೀಟು ಉದ್ಯಾನವನದಲ್ಲಿ ಮತ್ತೊಮ್ಮೆ ಮೊಗದೊಮ್ಮೆ ನೋಡುವಂತೆ ಜನಮನ ಸೆಳೆಯುತ್ತಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್,ಅಂಬೇಡ್ಕರ್, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಕವಿ ಕುವೆಂಪು, ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರಬೋಸ್, ಭಗತ್‍ಸಿಂಗ್, ಪುನಿತ್ ರಾಜ್‍ಕುಮಾರ್ ಸೇರಿದಂತೆ ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ/ ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗಿದೆ. ವಿವಿಧ ಅಲಂಕಾರಿಕ ಗಿಡಗಳಾದ ಬೋನ್ಸ್‍ಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆ ಹಾಗೂ ಅಂಥೋರಿಯಂ ಹೂವಿನ ಪ್ರದರ್ಶನ ಗಮನ ಸೆಳೆಯುತ್ತಿದೆ.
ಚುನಾವಣೆ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ಮತ್ತೊಮ್ಮೆ ಓದುವಂತೆ ಮಾಡುತ್ತದೆ. 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿ, ಹೆಸರು ಸೇರ್ಪಡೆ ಮಾಡಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಿ, ಹೀಗೆ ಪ್ರತಿಯೊಂದು ಕಲಾಕೃತಿಗಳು ನೋಡುಗರನ್ನು ಮತ್ತೊಮ್ಮೆ ವೀಕ್ಷಿಸುವಂತೆ ಮಾಡುತ್ತವೆ.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕಾಫಿ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಸಿ.ಎಂ., ನಗರಸಭಾ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಫಲಪುಷ್ಪ ಪ್ರದರ್ಶನವನ್ನು ವರ್ಷದಿಂದ ವರ್ಷಕ್ಕೆ ಅತ್ಯುತ್ತಮವಾಗಿ ಏರ್ಪಡಿಸಲಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜಾಸೀಟು ಉದ್ಯಾನವನ ಫಲಪುಷ್ಪ ಪ್ರದರ್ಶನವು ಕಣ್ಮನ ಸೆಳೆಯುತ್ತಿದ್ದು, ಪ್ರವಾಸಿಗರಲ್ಲಿ ಒಂದು ರೀತಿ ಸಂತಸ ತರುತ್ತದೆ. ನಾಡಿನ ಪ್ರವಾಸಿಗರು ರಾಜಸೀಟು ಉದ್ಯಾನವನದ ಫಲಪುಷ್ಪ ಪ್ರದರ್ಶನ ವೀಕ್ಷಿಸುವಂತಾಗಬೇಕು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿಸಿ ಗ್ರೇಟರ್ ರಾಜಸೀಟು ಮತ್ತು ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ಇತರೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗು ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.
ಇನ್ನು ಗಾಂಧಿ ಮೈದಾನದಲ್ಲಿ 60 ಕ್ಕೂ ಹೆಚ್ಚು ವಸ್ತು ಪ್ರದರ್ಶನ ಮಳಿಗೆಯನ್ನು ನಿರ್ಮಾಣ ಮಾಡಲಾಗಿದ್ದು, ತೋಟಗಾರಿಕೆ, ಪಶುಪಾಲನೆ, ಕೃಷಿ, ಆಯುಷ್, ಕಾಫಿ ಮಂಡಳಿ, ಕೈಗಾರಿಕೆ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ, ಕಾರ್ಮಿಕ, ಹೀಗೆ ಹಲವು ಇಲಾಖೆಗಳು ವಸ್ತುಪ್ರದರ್ಶನ ಏರ್ಪಡಿಸಿರುವುದು ವಿಶೇಷವಾಗಿದೆ.
ವೈನ್ ಮೇಳಕ್ಕೆ ಚಾಲನೆ; ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ವೈನ್‍ಮೇಳವನ್ನು ಆಯೋಜಿಸಲಾಗಿದ್ದು, ಕೊಡಗಿನ ಹೋಮ್ ಮೇಡ್ ವೈನ್‍ಗಳು ಹಾಗೂ ಕರ್ನಾಟಕ ದ್ರಾಕ್ಷರಸ ಮಂಡಳಿ ವತಿಯಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ವೈನ್ ಮೇಳಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷರಾದ ನಾರಾಯಣ ರೆಡ್ಡಿ, ನಿರ್ದೇಶಕರಾದ ಅಭಿಲಾಷ್, ವ್ಯವಸ್ಥಾಪಕ ನಿರ್ದೇಶಕರಾದ ಸೋಮು, ಜನರಲ್ ಮ್ಯಾನೇಜರ್ ಸರ್ವೇಶ್ ಇತರರು ಇದ್ದರು.
ವೈನ್ ತಯಾರಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. ಒಟ್ಟಾರೆ ರಾಜಸೀಟಿ ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನ ಮತ್ತು ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನ ಗಮನ ಸೆಳೆಯುತ್ತವೆ.
ಮತ್ತಷ್ಟು ಮಾಹಿತಿ: ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ಸಾವಿರದಿಂದ 12 ಸಾವಿರ ಸಂಖ್ಯೆಯ ಹದಿನೈದರಿಂದ ಇಪ್ಪತ್ತು ಜಾತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ನಾಟಿ ಮಾಡಲಾಗಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆಯ ಕಲಾಕೃತಿಯನ್ನು 18 ಅಡಿ ಎತ್ತರದಲ್ಲಿ 13 ಅಡಿ ಉದ್ದ 35 ಅಡಿ ಅಗಲದಲ್ಲಿ ವಿವಿಧ ಹೂವುಗಳಿಂದ ನಿರ್ಮಾಣ ಮಾಡಲಾಗಿದೆ.
ಮತದಾರರಿಗೆ ಮತದಾನನದ ಬಗ್ಗೆ ಅರಿವು ಮೂಡಿಸಲಾಗಿದೆ. ಕೊಡಗಿನ ಮುಖ್ಯ ಬೆಳೆ ಕಾಫಿಯನ್ನು ಪ್ರತಿಬಿಂಬಿಸಲು ಕಾಫಿ ಕಫ್ ಹಾಗೂ ಸಾಸರ್ ಮಾದರಿಯ ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಮಾಸಾ ಮತ್ತು ಬೀರ್, ಪೆÇೀಟೋ ಪ್ರೇಮ್, ಸೆಲ್ಫಿ ಜೋನ್ ಮಾದರಿಯನ್ನು ಹೂವು ಮತ್ತು ಎಲೆಗಳಿಂದ ತಯಾರಿಸಲಾಗಿದೆ.
ಗಾಂಧಿ ಮೈದಾನದಲ್ಲಿ 60 ವಿವಿದ ವಸ್ತು ಪ್ರದರ್ಶನ ಮಳಿಗೆಯನ್ನು ನಿರ್ಮಿಸಲಾಗಿದ್ದು, ಇದರಲ್ಲಿ 20 ಮಳಿಗೆಯನ್ನು ತೋಟಗಾರಿಕೆ, ಕೃಷಿ, ಮೀನುಗಾರಿಕೆ, ಕೈಗಾರಿಕೆ ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದೆರಿಸಲಾಗಿದೆ. 40 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ರೈತರು ಬೆಳೆದಿರುವಂತಹ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರು ಬೆಳೆಗಳ ಪ್ರದರ್ಶಿಕೆ ಏರ್ಪಡಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Articleಎಚ್.ಎನ್.ರಾಜು ಗೆ ಬೀಳ್ಕೊಡುಗೆ : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಮುಖ್ಯ : ಶ್ರೀ ಸದಾಶಿವ ಸ್ವಾಮೀಜಿ
Next Article ಅಪ್ಪಚೆಟ್ಟೋಳಂಡ ಹಾಕಿ ನಮ್ಮೆ : ಗ್ಯಾಲರಿ ನಿರ್ಮಾಣಕ್ಕೆ ಭೂಮಿಪೂಜೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.