ಕಡಂಗ ಫೆ.4 : ಕರಡ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರ ಜೀವನಕ್ಕೆ ಆಸರೆಯಾಗಿರುವ ಕಾಫಿ ಫಸಲನ್ನು ತಿಂದು ನಾಶಪಡಿಸುತ್ತಿರುವ ಹಿನ್ನೆಲೆ ರೈತರು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಒಂದಲ್ಲಾ ಒಂದು ಸಮಸ್ಯೆಯಿಂದ ಜನರು ಕಂಗಾಲಾಗಿದ್ದಾರೆ. ಹಲವಾರು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿದರು ಯಾವುದೆ ಪ್ರಯೋಜನವಾಗಲಿಲ್ಲ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದರು.
ಸರಕಾರ ಈ ಬಗ್ಗೆ ಗಮನಹರಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಪಂಚಾಯತ್ ಸದಸ್ಯ ವಿಲಿನ್ ಬೇಪಡಿಯಂಡ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವರದಿ : ನೌಫಲ್ ಕಡಂಗ