ಮಡಿಕೇರಿ ಫೆ.4 : ದಿನ ನಿತ್ಯದ ವ್ಯವಹಾರದ ಮಧ್ಯೆ ಆರೋಗ್ಯವೇ ಭಾಗ್ಯ ಎನ್ನುವುದನ್ನು ಮರೆಯಬಾರದು ಎಂದು ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಹೇಳಿದರು.
ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಅಶ್ವಿನಿ ಆಸ್ಪತ್ರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಯೋಗ್ ಆಸ್ಪತ್ರೆ, ವಾಕ್ ಮತ್ತು ಶ್ರವಣ ಇನ್ ಪ್ಲಾಂಟ್‍ಕ್ಲಿನಿಕ್ ಹಾಗೂ ಜಸ್ಟೀಸ್ ಕೆ.ಎಸ್. ಹೆಗಡೆ ಸ್ಮಾರಕದಂತ ವಿಭಾಗದ ಸಹಯೋಗದಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ
ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಮ್ಮ ಆರೋಗ್ಯಕ್ಕೆ ಪ್ರಥಮ ಆದ್ಯತೆ ಕೊಡಬೇಕು. ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ಮೂಲದಲ್ಲೇ ಗುಣಪಡಿಸಬಹುದು ಎಂದ ಅವರು ಸರ್ವೇಜನಃ ಸುಖಿನೋಭವತು ಎನ್ನುವುದು ಕೊರೊನಾ ಸಮಯದಲ್ಲಿ ಹೆಚ್ಚು ಪ್ರಸ್ತುತವಾಯಿತು. ಇಂತಹ ಶಿಬಿರಗಳ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಅಶ್ವಿನಿ ಆಸ್ಪತ್ರೆ ಕಾರ್ಯದರ್ಶಿ ಕುಪ್ಪಂಡರಾಜಪ್ಪ ಮಾತನಾಡಿ, ಸೇವೆಗಾಗಿಯೇ ಇರುವ ಅಶ್ವಿನಿ ಆಸ್ಪತ್ರೆ ಈಗ ಪ್ರಗತಿ ಸಾಧಿಸುತ್ತಿದೆ. 100 ಹಾಸಿಗೆಗಳ ಆಸ್ಪತ್ರೆ ಆಗಿ ಮೇಲ್ದರ್ಜೆಗೆ ಏರುತ್ತಿದೆ. ಹೃದ್ರೋಗ, ಕ್ಯಾನ್ಸರ್ ನಂತಹ ಕಾಯಿಲೆಗಳಿಗೂ ಚಿಕಿತ್ಸೆ ಕೊಡುವ ಸಿದ್ಧತೆ ನಡೆಸಲಾಗುತ್ತಿದೆ. ಜನರಲ್ಲಿ ಬೌದ್ಧಿಕ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮ ಮಾಡಬೇಕು ಎಂದೂ ಹೇಳಿದರು.
ಸ್ತ್ರೀ ರೋಗ ತಜ್ಞ ಡಾ.ಪವನ್ ಭಾರ್ಗವ್ ಮಾತನಾಡಿ, ನಾವು ಆರೋಗ್ಯವಾಗಿ ಇದ್ದೇವೆ ಅಂದು ಕೊಂಡು ಜೀವನ ನಡೆಸುತ್ತಿರುತ್ತೇವೆ. ಆದರೆ ಕಾಯಿಲೆಗಳು ಕೈಮೀರಿ ಹೋಗಿ ತೊಂದರೆ ಆಗುವ ಮೊದಲು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಉಳ್ಳಿಯಡ ಎಂ. ಪೂವಯ್ಯ ಮಾತನಾಡಿ, ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಜನಮುಖಿ, ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಮತ್ತಷ್ಟು ಕಾರ್ಯಕ್ರಮಗಳನ್ನು ನಡೆಸಲು ಸಿದ್ದತೆ ನಡೆಸಲಾಗುತ್ತಿದೆ. ಅರೋಗ್ಯ ಸೇವೆ ವ್ಯಾಪಾರೋದ್ಯಮ ಆಗಿರುವ ಇಂದಿನ ದಿನಗಳಲ್ಲಿ ಅಶ್ವಿನಿ ಆಸ್ಪತ್ರೆ ಸಾಮಾಜಿಕ ಸೇವೆ ಸಲ್ಲಿಸುತ್ತಿದೆ ಎಂದು ಶ್ಲಾಘಿಸಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಜೇರುಸ್ ಥಾಮಸ್ ಅಲೆಕ್ಸಾಂಡರ್, ಸುಯೋಗ ಆಸ್ಪತ್ರೆಯ ಡಾ.ರಾಘವೇಂದ್ರ ಮಾತನಾಡಿದರು. ದಂತ ವೈದ್ಯೆ ಡಾ. ಅನುಶ್ರೀ ವೇದಿಕೆಯಲ್ಲಿ ಇದ್ದರು.
ಪ್ರೆಸ್‍ಕ್ಲಬ್ ನಿರ್ದೇಶಕ ದಿವಾಕರ್ (ಜಾಕಿ) ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಿ ಮಹೋತ್ಸವ ಆರೋಗ್ಯ ಸಮಿತಿ ಸಂಚಾಲಕ ಎಂ.ಅಬ್ದುಲ್ಲಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತೀಕ್ಷಾ ಬಿ.ವಿ. ಪ್ರಾರ್ಥಿಸಿದರು. ವಾಕ್ ಮತ್ತು ಶ್ರವಣ ಇನ್‍ಪ್ಲಾಂಟ್ ಕ್ಲಿನಿಕ್‍ನ ಡಾ.ದಿವ್ಯಜ್ಯೋತಿ ವಂದಿಸಿದರು.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*