ಚೆನ್ನೈ : ಭಾರತ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ನಿಧನರಾಗಿದ್ದಾರೆ. ತಮಿಳುನಾಡಿನ ಚೆನ್ನೈನ ತಮ್ಮ ಮನೆಯಲ್ಲಿ ವಾಣಿ ಜಯರಾಂ ಕೊನೆಯುಸಿರೆಳೆದಿದ್ದಾರೆ.
ವಾಣಿಜಯರಾಂ ಅವರು ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಒಡಿಯಾ ಹಾಗೂ ಬಂಗಾಳಿ ಭಾಷೆಯಲ್ಲಿ ಸುಮಾರು 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.