ಮಡಿಕೇರಿ ಫೆ.4 : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಎಂ.ಎನ್.ರಾವುಫ್ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಸಂಬಂಧ ಸಭೆ ನಡೆಯಿತು.
ನಗರದಲ್ಲಿ ನಡೆದ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದ ಅವರು, ಮುಂದಿನ ದಿನಗಳಲ್ಲಿ ಬೂತ್ ಸಮಿತಿಗಳನ್ನು ರಚಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಾಗುವುದು, ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗುವುದು ಎಂದರು.
ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಕಾರ್ಯಕರ್ತರಲ್ಲಿದ್ದು, ಮುಖಂಡರು ಕೂಡ ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.
ಪಕ್ಷದ ನಗರ ಉಪಾಧ್ಯಕ್ಷ ಯಾಕುಬ್, ಪ್ರಮುಖರಾದ ಹಫೀಜ್, ರೆಹಮಾನ್, ಕೌಸರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.














