ಮಡಿಕೇರಿ ಫೆ.4 : ವಿಶ್ವದಲ್ಲಿ ಅಪಘಾತದಿಂದ ಹೆಚ್ಚಿನ ಸಾವು-ನೋವುಗಳು ಕಂಡುಬರುತ್ತಿವೆ. ಹಾಗೆಯೇ ಎರಡನೇಯದಾಗಿ ಕ್ಯಾನ್ಸರ್ ರೋಗದಿಂದ ಹೆಚ್ಚಿನ ಜನರು ಮೃತಪಡುತ್ತಿದ್ದಾರೆ. ಆದ್ದರಿಂದ ಕ್ಯಾನ್ಸರ್ ರೋಗ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ‘ವಿಶ್ವ ಕ್ಯಾನ್ಸರ್ ದಿನಾಚರಣೆ’ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಅತಿಯಾದರೆ ಅಮೃತವು ವಿಷ’ ಎಂಬುದನ್ನು ಮರೆಯಬಾರದು. ಆದ್ದರಿಂದ ಕ್ಯಾನ್ಸರ್‍ನಿಂದ ಸಂಭವಿಸುವ ಅಪಾಯವನ್ನು ಕಡಿಮೆ ಮಾಡಲು ಆರೋಗ್ಯಕರ ‘ಜೀವನ ಶೈಲಿ’ ಮತ್ತು ವಯಸ್ಸಿಗೆ ತಕ್ಕಂತೆ ‘ಆಹಾರ ಪದ್ಧತಿ’ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ರಕ್ತದ ಮೂಲಕ ಕ್ಯಾನ್ಸರ್ ಬೇಗ ಹರಡುತ್ತದೆ. ಆದ್ದರಿಂದ ಪ್ರತೀ ನಿತ್ಯ ವ್ಯಾಯಾಮ, ಯೋಗ ಮಾಡಬೇಕು. ದೇಹಕ್ಕೆ ಆಯಾಸ ಆಗುವ ರೀತಿ ಕೆಲಸ ಮಾಡಬೇಕು ಎಂದು ಡಾ.ಬಿ.ಸಿ.ಸತೀಶ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ವಿಭಾಗದ ಮುಖ್ಯಸ್ಥರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಕ್ಯಾನ್ಸರ್ ಎಂದ ಕೂಡಲೇ ಭಯ ಪಡಬಾರದು. ಯಾವುದೇ ರೋಗಕ್ಕೂ ಸಹ ಔಷಧ ಇರುತ್ತದೆ. ಆದರೆ ಆರಂಭದಲ್ಲಿಯೇ ಗುಣಪಡಿಸಿಕೊಳ್ಳಲು ಮುಂದಾಗಬೇಕು ಎಂದರು.
‘ಕಲುಷಿತ ನೀರು, ಕಲುಷಿತ ಆಹಾರ, ಕಲುಷಿತ ಪರಿಸರದಿಂದ ನಾನಾ ರೋಗಗಳು ಬರಲಿದ್ದು, ಈ ಬಗ್ಗೆ ತುಂಬಾ ಎಚ್ಚರವಹಿಸಬೇಕು ಎಂದು ಡಾ.ನಂಜುಂಡಯ್ಯ ಅವರು ಹೇಳಿದರು.
ಕ್ಯಾನ್ಸರ್ ಬಗ್ಗೆ ಜನ ಸಾಮಾನ್ಯರಲ್ಲಿ ಇರಬಹುದಾದ ಭಯ ಮತ್ತು ಪೂರ್ವಾಗ್ರಹವನ್ನು ಹೋಗಲಾಡಿಸಲು ಮತ್ತು ಅದರ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿಶ್ವ ಕ್ಯಾನ್ಸರ್ ದಿನಾಚರಣೆ ಆಚರಿಸಲಾಗುತ್ತಿದೆ. ಈ ಮಾರಕ ರೋಗದ ವಿರುದ್ಧ ಹೋರಾಡಲು ಏಕೈಕ ಮಾರ್ಗವೆಂದರೆ ಕ್ಯಾನ್ಸರ್‍ನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಸಮಯದಲ್ಲಿ ಔಷಧೋಪಚಾರ ಮಾಡಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾತನಾಡಿ ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿತ ಹಾಗೂ ಪಾಶ್ರ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಜಿಲ್ಲಾಡಳಿತ ಭವನದ ಆವರಣದಿಂದ ‘ನಮ್ಮ ದನಿಗಳನ್ನು ಕೂಡಿಸೋಣ, ಮತ್ತು ಕ್ರಮ ಕೈಗೊಳ್ಳೋಣ’ ಎಂಬ ಘೋಷ ವಾಕ್ಯದೊಂದಿಗೆ ‘ವಿಶ್ವ ಕ್ಯಾನ್ಸರ್ ಜಾಗೃತಿ ದಿನ’ದ ಜಾಥಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಚಾಲನೆ ನೀಡಿದರು.
ಜಾಥವು ಜಿಲ್ಲಾಡಳಿತ ಭವನದಿಂದ ಮಂಗೇರಿರ ಮುತ್ತಣ್ಣ, ಜನರಲ್ ತಿಮ್ಮಯ್ಯ ವೃತ್ತ ಮಾರ್ಗವಾಗಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಗೊಂಡಿತು. ಜಾಥಾದಲ್ಲಿ ಕ್ಯಾನ್ಸರ್ ಕುರಿತು ಘೋಷಣೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*