ಮಡಿಕೇರಿ ಫೆ.5 : ಕೊಡಗು ಜಿಲ್ಲಾ ಬಂಟರ ಸಂಘದ ಮಹಾಸಭೆ ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ನಡೆಯಿತು. ಸಂಘದ ಪ್ರಬಾರ ಅಧ್ಯಕ್ಷ ವಿ.ರವೀಂದ್ರ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿ.ಡಿ.ಜಗದೀಶ್ ರೈ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲನಗರದ ಉದ್ಯಮಿ ವಿ.ರವೀಂದ್ರ ರೈ ಅವಿರೋಧ ಆಯ್ಕೆಯಾದರು.
ಸಭೆಯ ಆರಂಭದಲ್ಲಿ ಉಪಾಧ್ಯಕ್ಷ ಬಿ.ಕೆ.ರವೀಂದ್ರ ರೈ ಅವರು ಸಂಘ ಮತ್ತು ಟ್ರಸ್ಟ್ನ ಆಸ್ತಿಯ ಬಗ್ಗೆ ವಿವರಣೆ ನೀಡಿದರು. ಜಾಗದ ವಿಚಾರವಾಗಿ ಕೆಲವರು ದುರುದ್ದೇಶಪೂರಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಜಾಗದ ಬಗೆಗಿನ ಎಲ್ಲಾ ನಿಖರ ದಾಖಲೆಗಳು ಸಂಘದ ಬಳಿ ಇದ್ದು, ಯಾರು ಯಾವಾಗ ಬೇಕಾದರೂ ಪರಿಶೀಲಿಸಬಹುದೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿ.ರವೀಂದ್ರ ರೈ ಮಾತನಾಡಿ, ಹಲವು ವರ್ಷಗಳ ಬಳಿಕ ಎಲ್ಲರು ಒಟ್ಟು ಸೇರಿದ್ದೇವೆ. ಮಾಜಿ ಅಧ್ಯಕ್ಷರು, ಕಾರ್ಯದರ್ಶಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಕೆಲವೇ ಕೆಲವರು ಸೇರಿ ಸಂಘದ ಸದಸ್ಯರನ್ನು ಗಮನಕ್ಕೆ ತೆಗೆದುಕೊಳ್ಳದೆ ತಾವೇ ಸಂಘ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಈ ಹಿಂದೆ ಆಡಳಿತ ಮಂಡಳಿ ಸಭೆ ಕರೆಯುವುದಕ್ಕೂ ಆಸಕ್ತಿ ತೋರಿಸಿರಲಿಲ್ಲ. ಹಲವು ಬಾರಿ ಗಡುವು ನೀಡಿದರೂ ಸಭೆ ಕರೆಯಲಿಲ್ಲ. ಜನವರಿ 8ರಂದು ಔತಣಕೂಟದ ಹೆಸರಿನಲ್ಲಿ ಸಭೆ ನಡೆಸಿ ಘೋಷಣೆ ಮಾಡಿಕೊಂಡಿದ್ದಾರೆ. ಸಂಘದ ಪದಾಧಿಕಾರಿಗಳಿಗೂ ಮಾಹಿತಿ ನೀಡಲಿಲ್ಲ. ಈಗ ಸಮಾಜದವರ ವಿರುದ್ಧವೇ ಕೆಟ್ಡದಾಗಿ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಡಿ.ಜಗದೀಶ್ ರೈ ಮಾತನಾಡಿ, ಮುಂದಿನ ದಿನಗಳÀಲ್ಲಿ ಸಂಘದಲ್ಲಿ ಯಾವುದೇ ಗೊಂದಲ ಇರುವುದಿಲ್ಲ. ಮುಂದಿನ ದಿನದಲ್ಲಿ ಸಮುದಾಯಕ್ಕೆ ಬೇಕಾದ ಅಗತ್ಯ ಕೆಲಸ ಕಾರ್ಯಗಳನ್ನು ಎಲ್ಲರನ್ನೂ ಪರಿಗಣನೆಗೆ ತೆಗೆದುಕೊಂಡು ಮಾಡುವುದಾಗಿ ಹೇಳಿದರು.
ಸಮುದಾಯಕ್ಕೆ ಬಂಟರ ಭವನದ ಅಗತ್ಯತೆ ಇದೆ. ತನ್ನ ಆಡಳಿತಾವಧಿಯಲ್ಲಿ ಭವನ ನಿರ್ಮಾಣ ಮಾಡಿ ತೋರಿಸುವುದಾಗಿ ಭರವಸೆ ನೀಡಿದರು. ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಶೀಘ್ರದಲ್ಲೇ ಆಯ್ಕೆ ಮಾಡುವುದಾಗಿ ಜಗದೀಶ್ ರೈ ತಿಳಿಸಿದರು.
ಕಾರ್ಯದರ್ಶಿ ಬಿ.ಸಿ.ಹರೀಶ್ ರೈ ವರದಿ ವಾಚಿಸಿದರು. ಖಜಾಂಚಿ ಬಿ.ಎನ್. ರತ್ನಾಕರ ರೈ ಆರ್ಥಿಕ ವರದಿ ಮಂಡಿಸಿದರು. ಗೌರವಾಧ್ಯಕ್ಷ ಬಿ.ಬಿ.ಐತಪ್ಪ ರೈ ಪ್ರಾಸ್ತಾವಿಕ ಮಾತನಾಡಿದರು. ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜನಾರ್ದನ ಶೆಟ್ಟಿ, ವಿರಾಜಪೇಟೆ ತಾಲೂಕು ಅಧ್ಯಕ್ಷ ದುಷ್ಯಂತ ರೈ, ಮಡಿಕೇರಿ ತಾಲೂಕು ಅಧ್ಯಕ್ಷ ರಮೇಶ್ ರೈ, ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ವಸಂತ ರೈ, ಮಡಿಕೇರಿ ನಗರ ಮಹಿಳಾ ಘಟಕ ಅಧ್ಯಕ್ಷೆ ಸೌಮ್ಯ ಶೆಟ್ಟಿ ಉಪಸ್ಥಿತರಿದ್ದು ನೂತನ ಸಮಿತಿಗೆ ಬೆಂಬಲ ವ್ಯಕ್ತಪಡಿಸಿದರು. ಬಾಲಕೃಷ್ಣ ರೈ ಸ್ವಾಗತಿಸಿದರು. ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು. ಹಿತ ಯೋಗೇಶ್ ಶೆಟ್ಟಿ ಪ್ರಾರ್ಥಿಸಿದರು. ಹರೀಶ್ ರೈ ವಂದಿಸಿದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*