ಮಡಿಕೇರಿ ಫೆ.6 : ವಿಜಯಪುರದಲ್ಲಿ ನಡೆದ ರಾಜ್ಯಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಯನ್ನು ಕೊಡಗಿನ ಪತ್ರಕರ್ತರಾದ ಪುತ್ತರಿರ ಕರುಣ್ ಕಾಳಯ್ಯ ಹಾಗೂ ಜಗದೀಶ್ ಜೋಡುಬೀಟಿ ಅವರಿಗೆ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ 37ನೇ ಕರ್ನಾಟಕರಾಜ್ಯ ಸಮ್ಮೇಳನದಲ್ಲಿ ಆರ್ಥಿಕ ದುರ್ಬಲ ವರ್ಗದ ಅತ್ಯುತ್ತಮ ವರದಿಗೆ ಬಿ.ಜಿ ತಿಮ್ಮಪ್ಪಯ್ಯ ಪ್ರಶಸ್ತಿ ಯನ್ನು ವಿಜಯ ಕರ್ನಾಟಕ ವರದಿಗಾರ ಜಗದೀಶ್ ಜೋಡುಬೀಟಿ ಪಡೆದರೆ ವೀರಸೇನಾನಿಯ ಬಗೆಗಿನ ಅತ್ಯುತ್ತಮವರದಿಗೆ ಸಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿಗೆ ಶಕ್ತಿವರದಿಗಾರ ಪುತ್ತರಿರ ಕರುಣ್ ಕಾಳಯ್ಯ ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವ ಬಸವನ ಬಾಗೇವಾಡಿ, ಶಾಸಕ ಶಿವಾನಂದ ಪಾಟೀಲ್ , ಜಿಲ್ಲಾಧಿಕಾರಿ ಡಾ.ವಿಜಯಮ ಹಾಂತೇಶ ದಾನಮ್ಮ , ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಮಾಜಿ ಶಾಸಕ ಡಾ.ಮಕ್ಬೂಲ್ ಬಾಗವಾನ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಮೊಹ್ಮದ್‌ರಫೀಕ್ ಟಪಾಲ್,ಐಯುಡಬ್ಲೂಜೆಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಂಘದ ನಿರ್ದೇಶಕ ಮಂಜುನಾಥ್ ಟಿ.ಎನ್. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಪೊನ್ನಂಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್, ಎನ್. ಎನ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಪಳೆಯಂಡ ಪಾರ್ಥ ಚಿಣ್ಣಪ್ಪ, ಕಾರ್ಯದರ್ಶಿ ಪ್ರೇಮ್ ಕುಮಾರ್. ಜೆ ಹಾಗೂ ಸದಸ್ಯ ಸಂತೋಷ್ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Breaking News
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*