ಮಡಿಕೇರಿ ಫೆ.6 : ಮಹಿಳಾ ಫಲಾನುಭವಿಯೊಬ್ಬರಿಂದ ಲಂಚದ ರೂಪದಲ್ಲಿ ರೂ.10 ಸಾವಿರ ಸ್ವೀಕರಿಸುತ್ತಿದ್ದ ಆರೋಪದಡಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ, ಓರ್ವ ನಿರ್ದೇಶಕಿ ಹಾಗೂ ವಾಹನ ಚಾಲಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಗಮದ ವ್ಯವಸ್ಥಾಪಕ ಚಂದ್ರಶೇಖರ್, ಕಚೇರಿ ನಿರ್ದೇಶಕಿ ಚೆಲುವಾಂಬ ಹಾಗೂ ವಾಹನ ಚಾಲಕ ತಿರುಮಲೇಶ್ ಎಂಬುವವರನ್ನು ವಿಚಾರಣೆಗೊಳಪಡಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಬ್ಸಿಡಿ ಆಧಾರಿತ ಸಾಲ ಯೋಜನೆಯಡಿ ಮಹಿಳೆಯೋರ್ವರು ಕೋಳಿ ಅಂಗಡಿಗಾಗಿ 2021ರ ಅಕ್ಟೋಬರ್‌ನಲ್ಲಿ 3 ಲಕ್ಷ ರೂ. ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಮಹಿಳೆಗೆ ಮೊದಲ ಹಂತದ ಹಣ ಪಾವತಿಯಾಗಿತ್ತು. 2ನೇ ಹಂತದ 1 ಲಕ್ಷ ರೂ. ಹಣ ಬಿಡುಗಡೆಗೆ ಆರೋಪಿಗಳು 10 ಸಾವಿರ ರೂ.ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಫಲಾನುಭವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮವಾರ ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಮೂವರನ್ನು ಹಣ ಸಹಿತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಐ.ಜಿ.ಪಿ. ಸುಬ್ರಮಣ್ಯೇಶ್ವರ್ ರಾವ್ ನಿರ್ದೇಶನದಂತೆ ಮೈಸೂರು ಲೋಕಾಯುಕ್ತ ಎಸ್.ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕೊಡಗು ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್, ಮಡಿಕೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಲೋಕೇಶ್, ಮೈಸೂರು ಲೋಕಾಯುಕ್ತ ಇನ್ಸ್ಪೆಕ್ಟರ್ ರೂಪಾಶ್ರೀ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
Breaking News
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*