ನಾಪೋಕ್ಲು ಫೆ.6 : ನಾಪೋಕ್ಲು ವಿರಾಜಪೇಟೆ ಮುಖ್ಯರಸ್ತೆಯ ಕೊಳಕೇರಿ ಯಿಂದ ಕೋಕೇರಿಗೆ
ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ದುಸ್ಥಿತಿಯಿಂದ ಕೂಡಿದ್ದು ನಡೆದಾಡಲು
ಸಾಧ್ಯವಿಲ್ಲದಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಸೋಮವಾರ ಪ್ರತಿಭಟನೆ
ನಡೆಸಿದರು. ರಸ್ತೆಯನ್ನುಯನ್ನು ತಕ್ಷಣ ದುರಸ್ತಿಪಡಿಸುವಂತೆ ಒತ್ತಾಯಿಸಿದ
ಪ್ರತಿಭಟನಾಕಾರರು ತಪ್ಪಿದಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.
ಕೋಕೇರಿ- ಕೊಳಕೇರಿ ಸಂಪರ್ಕ ರಸ್ತೆಯಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ
ನಡೆದಿಲ್ಲ, ರಸ್ತೆ ಡಾಂಬರೀಕರಣ ಮಾಡಿಲ್ಲ. ವಾಹನ ಸಂಚಾರ ಮತ್ತು
ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ಭರವಸೆ ಮಾತ್ರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥ ಹರೀಶ್ ಆರೋಪಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಬ್ದುಲ್ ರಜಾಕ್ ಮಾತನಾಡಿ ಕೊಳಕೇರಿ-ಕೋಕೇರಿ
ಸಂಪರ್ಕ ರಸ್ತೆಯ ದುರಸ್ತಿಗಾಗಿ ನಾಲ್ಕೈದು ಬಾರಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರೇ
ಹೊಂಡ-ಗುಂಡಿ ಗಳನ್ನು ಮುಚ್ಚಿ ರಸ್ತೆ ದುರಸ್ತಿ ಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ
ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ
ಹೇಳಿದರು.
ಕೆ.ವೈ.ಅಶ್ರಫ್, ಎಂ.ಎ.ಮೊಯ್ದು, ಎಂ.ಎಂ.ಮಹಮ್ಮದ್, ಎಂ.ಎಂ.ಇಸ್ಮಾಯಿಲ್, ಟಿ.ಪಿ.ಬಶೀರ್, ಅಸಿನಾರ್, ಎಂ.ಎ.ಅಲಿ, ಎಂ.ಎ.ಫಲ್ಹಾಲು, ಎಂ.ಯು.ಲತೀಫ್, ಎಂ.ಯು.ಮಮ್ಮು, ಕೆ.ಎ.ಸಲಾಮು, ಎಂ.ವೈ.
ಸಂಶುದ್ದೀನ್, ಅಬ್ದುರಹ್ಮಾನ್, ಅರುಣಾ ಕೊಕೇರಿ, ಗಿರೀಶ್ ಕೊಕೇರಿ, ನಂದ ಕೊಕೇರಿ, ಅಬ್ದುಲ್
ರಹಮಾನ್ ಕೊಳಕೇರಿ, ಟಿ ಸಿ.ಲವ ಕೊಳಕೇರಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಾಪೋಕ್ಲು ಪೊಲೀಸ್ ಠಾಣೆ ಎಸ್ಐ ಗೋಪಾಲಕೃಷ್ಣ ಹಾಗೂ ಸಿಬ್ಬಂದಿ ಶರತ್ ರಾಜ್ ಇದ್ದರು. (ವರದಿ : ದುಗ್ಗಳ ಸದಾನಂದ)
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*