ಮಡಿಕೇರಿ ಫೆ.7 : ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳಕ್ಕೆ ಚಾಲನೆ ದೊರೆಯಿತು.
ನಂತರ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೇರಿದಂತೆ ಅಧಿಕಾರಿಗಳು ಮೇಳದಲ್ಲಿ ಭಾಗಿಯಾದ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳೆಯರು ತಯಾರಿಸಿದ ವಸ್ತುಗಳನ್ನು ಪರಿಶೀಲಿಸಿ ಶುಭ ಕೋರಿದರು.
ಮೇಳದಲ್ಲಿ ಗ್ರಾಮೀಣ ಭಾಗದ ಆಹಾರೋತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ಮತ್ತಿತರ ಸಾಮಾಗ್ರಿಗಳು ಗಮನ ಸೆಳೆಯತ್ತಿದೆ.