ಮಡಿಕೇರಿ ಫೆ.7 : ಸುಂಟಿಕೊಪ್ಪ ಸಮೀಪ ಫೆ.6 ರಂದು ಸಂಜೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.
ನಂಜನಗೂಡು ನಿವಾಸಿ ಜಯಸೂರ್ಯ (25) ಮೃತ ದುರ್ದೈವಿ. ಸೋಮವಾರ ಸಂಜೆ ಸುಂಟಿಕೊಪ್ಪದಿAದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಮೈಸೂರಿನಿಂದ ಮಂಗಳೂರಿಗೆ ಅಡುಗೆ ಅನಿಲದ ಖಾಲಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ತೀವ್ರವಾಗಿ ಗಾಯಗೊಂಡ ಜಯಸೂರ್ಯ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನ ಹೊಂದಿದರು.
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
















