Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಿಸಲು ಅವಕಾಶವಿಲ್ಲ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಿಸಲು ಅವಕಾಶವಿಲ್ಲ

ಫೆಬ್ರವರಿ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.7 : ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ಮತ್ತೊಂದು ಬಾರಿ ಪರಿಶೀಲಿಸುವಂತೆ ಸಲಹೆ ಮಾಡಿದರು. ಜಿಲ್ಲೆಯ ನೊಕ್ಯ ಮತ್ತು ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಅಭಿವೃದ್ಧಿ ಸಂಬAಧ ಗ್ರಾಮ ಅರಣ್ಯ ಸಮಿತಿ ಗಮನಕ್ಕೆ ತರುವಂತಾಗಬೇಕು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ಅವರು ಹೇಳಿದರು.
ಈ ಬಗ್ಗೆ ಮೂರು ದಿನದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ನಾಗರಹೊಳೆಯ ಆಶ್ರಮ ಶಾಲೆ ಕಟ್ಟಡವು ಹಳೆಯದಾಗಿದ್ದು, ಮಳೆಗಾಲದಲ್ಲಿ ವಿದ್ಯಾರ್ಥಿಗಳು ತುಂಬಾ ತೊಂದರೆ ಪಡುತ್ತಾರೆ. 175 ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಪ್ರಸ್ತುತ 70 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಬೇಕು. ಇಲ್ಲದಿದ್ದಲ್ಲಿ ಹತ್ತಿರದಲ್ಲಿ ಜಾಗ ಕೊಡಿಸಬೇಕು ಎಂದು ಅವರು ಮನವಿ ಮಾಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಿಸಲು ಅವಕಾಶವಿಲ್ಲ. ಈ ಸಂಬಂಧ ಹುಲಿ ಸಂರಕ್ಷಣಾ ಯೋಜನಾ ನಿರ್ದೇಶಕರ ಜೊತೆ ಚರ್ಚಿಸುವಂತೆ ಅವರು ಸಲಹೆ ಮಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಅವರು ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ ಸಂಬAಧ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಅನುಮೋದನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯಲಾಗಿದೆಯೇ ಎಂದು ಹೇಳಿದರು.
ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಪೊನ್ನಂಪೇಟೆ ಐಟಿಡಿಪಿ ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ, ಸೋಮವಾರಪೇಟೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಪಿಡಿಒಗಳಾದ ಶ್ಯಾಮ್(ಗುಡ್ಡೆಹೊಸೂರು), ಕಲ್ಪ ಬಿ.ಎಂ.(ನಂಜರಾಯಪಟ್ಟಣ) ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ನವೆಂಬರ್ 1, 2026

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು ಅ.31 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾದ…

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.