ಮಡಿಕೇರಿ ಫೆ.8 : ಬೈಕ್ ಗೆ ಆಂಬ್ಯುಲೆನ್ಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ- ಚೆಟ್ಟಳ್ಳಿ ರಸ್ತೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುತ್ತಿದ್ದ ಲೋಕೇಶ್ (44) ಎಂಬುವವರೇ ಮೃತ ದುರ್ದೈವಿ.
ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದ ಲೋಕೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.














