ಮಡಿಕೇರಿ ಫೆ.8 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬoಧ ಮತಗಟ್ಟೆಗಳ ಸುಸ್ಥಿತಿ ಸಂಬAಧ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ನಗರದ ಜಿ.ಪಂ.ಸಭಾoಗಣದಲ್ಲಿ ಮಾಹಿತಿ ಪಡೆದರು.
ಜಿಲ್ಲೆಯಲ್ಲಿ 542 ಮತಗಟ್ಟೆಗಳಿದ್ದು, ಮತಗಟ್ಟೆ ಸುಸ್ಥಿತಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸೆಕ್ಟರ್ ವ್ಯಾಪ್ತಿಯಲ್ಲಿ ಅತೀ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು.
ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ಮತಗಟ್ಟೆ ಸುಸ್ಥಿತಿ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ವಲ್ನರಬಲ್ ಮತ್ತು ಕ್ರಿಟಿಕಲ್ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು ಎಂದು ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು.
ಅಂತರ ರಾಜ್ಯ ಮತ್ತು ಅಂತರ್ ಜಿಲ್ಲಾ ಚೆಕ್‌ಪೋಸ್ಟ್ಗಳ ಬಗ್ಗೆ ನಿಖರ ವರದಿ ನೀಡಬೇಕು. ಈ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
‘ಈಗಾಗಲೇ ವಿದ್ಯುನ್ಮಾನ ಮತಯಂತ್ರ ಬಂದಿದ್ದು, ಪ್ರಥಮ ಹಂತದ ಪರಿಶೀಲನಾ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಡೆಮೋ ಮೂಲಕ ಮಾಹಿತಿ ನೀಡಬೇಕು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹಾಗೂ ಮತಗಟ್ಟೆ ಸ್ಥಳದ ಮತದಾರರಿಗೆ ಮಾಹಿತಿ ನೀಡುವುದು, ಭಾವಚಿತ್ರವಿರುವ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಮತದಾರರಿಗೆ ಖಾತರಿ ಪಡಿಸುವುದು, ಮತ್ತಿತರ ಕೆಲಸವನ್ನು ಮಾಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.’
ಸೆಕ್ಟರ್ ಅಧಿಕಾರಿಗಳು ಮಾಹಿತಿ ನೀಡಿ ಕೆಲವು ಮತಗಟ್ಟೆಗಳಲ್ಲಿ ಕುಡಿಯುವ ನೀರು ಕಲ್ಪಿಸಬೇಕು. ಶೌಚಾಲಯ ಸರಿಪಡಿಸಬೇಕು. ಕಟ್ಟಡ ರಿಪೇರಿ, ಬಾಗಿಲು, ಕಿಟಕಿ, ವಿದ್ಯುತ್ ಸಂಪರ್ಕ, ಗೋಡೆ ಬಿರುಕು, ರಸ್ತೆ ಸರಿ ಮಾಡುವುದು ಇತರೆ ಕಾರ್ಯಗಳು ಆಗಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಅವರ ಗಮನಕ್ಕೆ ತಂದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಶಾಲಾ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳನ್ನು ಸುಸ್ಥಿತಿಯಲ್ಲಿ ಇಡುವ ಸಂಬAಧ ಪಟ್ಟಿಮಾಡಿ ಸರ್ಕಾರಕ್ಕೆ ಕಳುಹಿಸಿದ್ದಲ್ಲಿ ಅನುದಾನ ಬಿಡುಗಡೆಯಾಗಲಿದ್ದು, ಅದನ್ನು ಬಳಸಿಕೊಂಡು ಮತಗಟ್ಟೆಗಳನ್ನು ಸರಿಪಡಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ವಿಧಾನಸಭಾ ಚುನಾವಣೆ ಸಂಬoಧ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತದ ಜತೆ ಸದಾ ಕೈಜೋಡಿಸಲಿದೆ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ತಮ್ಮ ತಮ್ಮ ಮತಗಟ್ಟೆ ವ್ಯಾಪ್ತಿ ಹಾಗೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಟಿಕಲ್ ಮತ್ತು ವಲ್ನರಬಲ್ ಪ್ರದೇಶದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು.
ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾರಾದರೂ ಸಾರ್ವಜನಿಕರಿಗೆ ತೊಂದರೆ ನೀಡುವುದು ಕಂಡುಬoದಲ್ಲಿ ಮಾಹಿತಿ ನೀಡಬೇಕು ಎಂದರು.
ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್(ಮಡಿಕೇರಿ ವಿಧಾನಸಭಾ ಕ್ಷೇತ್ರ), ಶಬಾನಾ ಎಂ.ಷೇಕ್(ವಿರಾಜಪೇಟೆ ವಿಧಾನಸಭಾ ಕ್ಷೇತ್ರ), ತಹಶೀಲ್ದಾರರಾದ ಎಸ್.ಎನ್.ನರಗುಂದ, ಪ್ರಕಾಶ್, ಅರ್ಚನಾ ಭಟ್, ಕಿರಣ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಇತರರು ತಮ್ಮ ವ್ಯಾಪ್ತಿಯ ಮತಗಟ್ಟೆ ಕೇಂದ್ರದಲ್ಲಿನ ಸುಸ್ಥಿತಿ ಬಗ್ಗೆ ಹಾಗೂ ಇತರೆ ಮೂಲಸೌಲಭ್ಯ ಸಂಬoಧಿಸಿದoತೆ ಮಾಹಿತಿ ನೀಡಿದರು.









