ಮಡಿಕೇರಿ ಫೆ.9 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇಲ್ಲಿನ ಗ್ರಂಥಾಲಯ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ 14 ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನವು’ ಫೆಬ್ರವರಿ, 10 ಮತ್ತು 11 ರಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.
ಫೆ.10 ರಂದು ಬೆಳಗ್ಗೆ 10 ಗಂಟೆಗೆ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಚಾಲನೆ ದೊರೆಯಲಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಬಿ.ಎಲ್.ಸುಜಾತ ರಾಥೋಡ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಸಚಿವರಾದ ಎ.ಬಿ.ಬಸವರಾಜು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಬಿ.ಕಾರ್ಯಪ್ಪ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ.ಟಿ.ಡಿ.ಕೆಂಪರಾಜು, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ಜೆ.ಮಹೇಂದ್ರ, ಆಡಳಿತಾಧಿಕಾರಿ ಎ. ಎಲ್.ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ಶೈಕ್ಷಣಿಕ ರಿಜಿಸ್ಟ್ರರ್ ಡಾ.ರವಿಕಿರಣ್, ಕರ್ನಾಟಕ ಆರೋಗ್ಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯಗಳ ಸಂಘದ ಅಧ್ಯಕ್ಷರಾದ ಡಾ.ಎಚ್.ಎಸ್.ಸಿದ್ದಮಲ್ಲಯ್ಯ, ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘದ ಅಧ್ಯಕ್ಷರು ಇತರರು ಪಾಲ್ಗೊಳ್ಳಲಿದ್ದಾರೆ.









