ಮಡಿಕೇರಿ ಫೆ.9 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು)ಯಡಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-2ಎ ನಲ್ಲಿ ಬರುವ ಸವಿತಾ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳ ಒಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು. ವೈಯುಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ.2.50 ಲಕ್ಷಗಳು, ಇದರಲ್ಲಿ ರೂ. 2 ಲಕ್ಷ ಸಹಾಯಧನ ಹಾಗೂ ರೂ. 50 ಸಾವಿರ ನಿಗಮದಿಂದ ಶೇ. 4ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿ ಇರುವಂತೆ ರೈತರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆ ಆಗಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)ಯಡಿ ಹಿಂದುಳಿದ ವರ್ಗಗಳ ಪ್ರವರ್ಗ-2ಎ ನಲ್ಲಿ ಬರುವ ಸವಿತಾ ಮತ್ತು ಇತರ ಉಪಜಾತಿಗಳಿಗೆ ಸೇರಿದ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಸಲ್ಲಿಸಬಹುದು.
ವಿದ್ಯಾರ್ಥಿಯ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷಗಳ ಒಳಗಿರಬೇಕು. ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿ ಇರುವಂತೆ ರೈತರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆ ಆಗಬೇಕು.
ಈ ಯೋಜನೆಗಳಲ್ಲಿ ಅರ್ಜಿದಾರರು/ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್, 03 ರವರೆಗೆ ಸಲ್ಲಿಸಬಹುದು.
ಈ ಎರಡು ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು/ವಿದ್ಯಾರ್ಥಿಗಳು ಹಿಂದೆ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಸವಿತಾ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಜಿದಾರರು ನಿಗಮದ ವೆಬ್ ಸೈಟ್ https://kssd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050773004/5, 8050370006, 7090400100, 7090400900 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*