ಮಡಿಕೇರಿ ಫೆ.9 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಫೆ.11 ಮತ್ತು 12 ರಂದು ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ.
ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಲಿದೆ.
ಫೆ.11 ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ ನಡೆಯಲಿದ್ದು, ಸಂಜೆ 6 ಗಂಟೆಗೆ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಹಾಗೂ 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ.
ಫೆ.12 ರಂದು ಬೆಳಿಗ್ಗೆ 8 ಗಂಟೆಯಿಂದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನದಾನ ನೆರವೇರಲಿದ್ದು, ಸಂಜೆ 5.30 ರಿಂದ ರಂಗಪೂಜೆ, 7 ಗಂಟೆಯಿಂದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನದಾನ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*