ಮಡಿಕೇರಿ ಫೆ.9 : ಬಿಜೆಪಿ ಸರ್ಕಾರ ಜನರ ಬೇಡಿಕೆಗೆ ಭಾವನತ್ಮಕಾವಾಗಿ ಸ್ಪಂದಿಸುತ್ತಿದೆ, ರಾಜ್ಯ ಪ್ರಗತಿಯೆಡೆಗೆ ಸಾಗುತ್ತಿದೆ ಎಂದು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ ಬೋಪಯ್ಯ ತಿಳಿಸಿದ್ದಾರೆ.
ಬಿ.ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಂಗಣ ಒಡಿಬೈಲು ಕಾಲೋನಿಯಲ್ಲಿ ಕಾವೇರಿ ನಿರಾವರಿ ನಿಗಮದ ರೂ.68 ಲಕ್ಷ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಸರ್ಕಾರ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೊಳಿಸಿ ಸಮರ್ಪಕವಾಗಿ ನಿರ್ವಹಿಸಿದೆ. ಎಂದು ಹೇಳಿದರು.
ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಗೆ ಆಶೀರ್ವಾದ ಮಾಡಬೇಕು. ದೇಶ ಇಂದು ಪ್ರಗತಿಯಲ್ಲಿ ಪ್ರಪಂಚದಲ್ಲಿಯೇ 5ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಭಾರತ ನಿಲ್ಲಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಬೋಪಯ್ಯ ಕರೆ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.