ಮಡಿಕೇರಿ ಫೆ.11 : ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “3ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಮಡಿಕೇರಿಯಲ್ಲಿ ಶಾಂತಿಯುತ ಜಾಗೃತಿ ಅಭಿಯಾನ ನಡೆಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಶ್ವದ ಶಾಂತಿ ಮತ್ತು ಭದ್ರತೆಗೆ ಆದ್ಯತೆ ನೀಡುವ ಅಂಶಗಳ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಅರಿವು ಮೂಡಿಸಲಾಯಿತು.
ಈ ಸಂದರ್ಭ ಸಂಘಟನೆಯ ಮಡಿಕೇರಿ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಷರೀಫ್ ಮಾತನಾಡಿ, ಅಹ್ಮದಿಯಾ ಮುಸ್ಲಿಂ ಜಮಾಅತಿನ ಜಾಗತಿಕ ನೇತಾರ ಹಝ್‍ರತ್ ಮಿರ್ಝಾ ಮಸ್‍ರೂರ್ ಅಹ್ಮದ್ ಸಾಹಿಬ್ ಅವರ ನಿರ್ದೇಶನದ ಮೇರೆಗೆ ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “3ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಭಾರತದ ವಿವಿಧೆಡೆ ಶಾಂತಿಯುತ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಮಡಿಕೇರಿ ನಗರದಲ್ಲೂ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಫೆ.12 ರಂದು ಶಾಂತಿ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನಿವೃತ್ತ ಏರ್ ಮಾರ್ಷಲ್ ಕೆ.ಸಿ.ನಂದ ಕಾರ್ಯಪ್ಪ, ಖ್ಯಾತ ವಕೀಲರು ಮತ್ತು ಲೇಖಕ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಹಾಗೂ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಪಂಚದಲ್ಲಿ ಮನುಕುಲ ನಾಶದ ಕಡೆ ಹೋಗಬಾರದು ಎಂಬ ಉದ್ದೇಶದಿಂದ “ಪ್ರೀತಿ ಎಲ್ಲರಲ್ಲು, ದ್ವೇಶವಿಲ್ಲ ಯಾರಲ್ಲು” ಎಂಬ ಸಂದೇಶದೊಂದಿಗೆ ವಿವಿಧೆಡೆ ಕಾರ್ಯಕ್ರವನ್ನು ಹಮ್ಮಿಕೊಂಡು ಶಾಂತಿ ಮೂಡಿಸಲು ಅಹ್ಮದಿಯಾ ಮುಸ್ಲಿಂ ಜಮಾಅತ್ ನಿರಂತರ ಪರಿಶ್ರಮ ಪಡುತ್ತಿದ್ದು, ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಉಪಾಧ್ಯಕ್ಷ ಎಂ.ಬಿ ಜಹೀರ್ ಅಹಮದ್ ಮಾತನಾಡಿ, ಪ್ರಪಂಚ ಇಂದು ವಿನಾಶದತ್ತ ಹೋಗುತ್ತಿವೆ. ಮಾನವ ಕೂಲದೊಂದಿಗೆ ಪ್ರೀತಿ, ವಾತ್ಸಲ್ಯ ಇಲ್ಲದಿದ್ದರೆ ದೇಶದಿಂದ ದೇಶಕ್ಕೆ ಹಗೆತನ ಹೆಚ್ಚಾಗುತ್ತದೆ. ಪ್ರಪಂಚದಲ್ಲಿ ಶಾಂತಿಯುತ, ಸಹಬಾಳ್ವೆಯಿಂದ ಬದುಕುವುದನ್ನು ನಾವು ಬಯಸುತ್ತೇವೆ. ಆದ್ದರಿಂದ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಹೇಲ್ ಅಹ್ಮದ್ ಸಾಹೇಬ್, ಧರ್ಮ ಗುರುಗಳಾದ ಮೌಲಾನ ಕಲೀಂ ಕಾನ್ ಸಾಹೇಬ್, ಉಸಾಮ್ ಅಹ್ಮದ್ ಸಾಹೇಬ್ ಹಾಗೂ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ಇದೇ ಸಂದರ್ಭ ಶಾಂತಿ ಸ್ಥಾಪನೆಯ ಸುವರ್ಣ ತತ್ವಗಳು ಎಂಬ ಕರಪತ್ರಗಳನ್ನು ವಿತರಿಸಲಾಯಿತು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*